ಮಡಿಕೇರಿ, ನ. ೨೭: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಮಡಿಕೇರಿ ವಿಸ್ತರಣಾ ಶಿಕ್ಷಣ ಘಟಕ ಹಾಗೂ ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗಳು ಮತ್ತು ವೀರಾಜಪೇಟೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೩೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಆವರಣದಲ್ಲಿ ಭತ್ತದ ಬೆಳೆ ಕ್ಷೇತ್ರೋತ್ಸವ-೨೦೨೧ ಸಮಗ್ರ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಕಾರ್ಯಕ್ರಮ ನಡೆಯಲಿದೆ.
ಶಿವಮೊಗ್ಗ ಕೆ.ಶಿ.ನಾ.ಕೃ.ತೋ.ವಿ.ವಿ. ಕುಲಪತಿ ಡಾ. ಎಂ.ಕೆ. ನಾಯಕ್, ಸಂಶೋಧನಾ ನಿರ್ದೇಶಕ ಡಾ. ಮೃತ್ಯುಂಜಯ ಸಿ.ವಾಲಿ, ವಿಸ್ತರಣಾ ನಿರ್ದೇಶಕ ಡಾ. ಹೇಮ್ಲಾ ನಾಯಕ್, ಮಡಿಕೇರಿ ಜಂಟಿ ಕೃಷಿ ನಿರ್ದೇಶಕಿ ಶಬಾನ ಎಂ. ಶೇಖ್, ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ನವದೆಹಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಸಹಾಯಕ ಮಹಾ ನಿರ್ದೇಶಕ ಡಾ. ಎಸ್. ಭಾಸ್ಕರ್, ತೀರ್ಥಹಳ್ಳಿ ಶಿಕ್ಷಣ ತಜ್ಞ ವಿ.ಕೆ. ಅರುಣ ಕುಮಾರ, ಬಂಟಗನಹಳ್ಳಿ ಎಸ್ಟೇಟ್ ಕೃಷಿ ಉದ್ದಿಮೆದಾರರಾದ ಬಿ. ಶಿವರಾಮ್, ಸೊರಬ ಪ್ರಗತಿಪರ ರೈತರಾದ ದೊಡ್ಡಗೌಡ ಸಿ. ಪಾಟೀಲ್, ಚನ್ನಗಿರಿ ಪ್ರಗತಿಪರ ರೈತರಾದ ಕೆ. ನಾಗರಾಜ್, ಶಿವಮೊಗ್ಗ ಪ್ರಗತಿಪರ ರೈತರಾದ ವೀರಭದ್ರಪ್ಪ ಪೂಜಾರಿ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಸಿ.ಜಿ. ಕುಶಾಲಪ್ಪ, ಕೆ.ಶಿ.ನಾ.ಕೃ.ತೋ.ವಿ.ವಿ. ಕುಲಸಚಿವ ಡಾ. ಆರ್. ಲೋಕೇಶ್ ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ ಬೆಳಿಗ್ಗೆ ೧೧.೩೦ ಗಂಟೆಯಿAದ ೨ ಗಂಟೆಯವರೆಗೆ ಕಾಫಿ ತೋಟದಲ್ಲಿ ಹಣ್ಣು ಮತ್ತು ಔಷಧೀಯ ಬೆಳೆಗಳ ಬೇಸಾಯ, ಸಮಗ್ರ ಕೃಷಿ ಪದ್ಧತಿಗಳು ಹಾಗೂ ಪಶುಪಾಲನೆ ತಾಂತ್ರಿಕತೆಗಳು, ಸಮಗ್ರ ಅಡಿಕೆ ಕೊಳೆ ರೋಗದ ನಿರ್ವಹಣಾ ಪದ್ಧತಿಗಳು, ಕೃಷಿ, ಅರಣ್ಯ ಪದ್ಧತಿಗಳು, ಉದ್ಯಮವಾಗಿ ಕೃಷಿ-ಕೋವಿಡ್ ನಂತರದಲ್ಲಿ ಯುವಜನತೆಗಿರುವ ಅವಕಾಶಗಳ ಕುರಿತು ವಿಚಾರಗೋಷ್ಠಿ ನಡೆಯಲಿದೆ.