ಮಡಿಕೇರಿ, ನ. ೨೭: ೨೦೨೦-೨೧ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮೊತ್ತವು ಮಂಜೂರಾಗಿದ್ದು, ಕೆಲವು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದೇ ಇರುವುದರಿಂದ ಶುಲ್ಕ ವಿನಾಯಿತಿ ಮೊತ್ತವು ಬ್ಯಾಂಕ್ ಖಾತೆಗೆ ಜಮೆ ಆಗಿರುವುದಿಲ್ಲ. ಇಂತಹ ವಿದ್ಯಾರ್ಥಿಗಳು ಕೂಡಲೇ ಸಂಬAಧಪಟ್ಟ ಬ್ಯಾಂಕ್‌ನ್ನು ಸಂಪರ್ಕಿಸಿ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿ ಎನ್‌ಪಿಸಿಐ ಮ್ಯಾಪಿಂಗ್ (ಓPಅI ಒಚಿಠಿಠಿiಟಿg) ಮಾಡಿಸುವುದು.

ಆಧಾರ್ ನೇಮ್ ಮಿಸ್‌ಮ್ಯಾಚ್ ಆಗಿರುವ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಲ್ಲಿರುವAತೆ ಆಧಾರ್ ಕಾರ್ಡ್ನಲ್ಲಿಯೂ ಸಹ ಹೆಸರನ್ನು ತಿದ್ದುಪಡಿಯನ್ನು ಮಾಡಿಸುವುದು. ಡಿಸೆಂಬರ್ ೨ ರೊಳಗೆ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸದೇ ಎನ್‌ಪಿಸಿಐ ಮ್ಯಾಪಿಂಗ್ ಆಗದೇ ಇದ್ದಲ್ಲಿ ಮತ್ತು ಆಧಾರ್ ನೇಮ್ ಮಿಸ್‌ಮ್ಯಾಚ್ ಆಗಿರುವುದನ್ನು ಸರಿಪಡಿಸದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ರದ್ದುಪಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ ೦೮೨೭೨-೨೯೫೬೨೮. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮಡಿಕೇರಿ ೯೪೮೦೩೫೬೪೦೯, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ೮೬೬೦೦೧೯೦೪೨ ಮತ್ತು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ವೀರಾಜಪೇಟೆ ೯೮೮೬೯೨೯೩೯೪ ನ್ನು ಸಂಪರ್ಕಿಸಬಹುದು.