ಮಡಿಕೇರಿ, ನ. ೨೮: ಮಡಿಕೇರಿ ಕೊಡವ ಸಮಾಜದ ೨೦೨೦-೨೧ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಪುತ್ತರಿ ಊರೊರ್ಮೆ ಕಾರ್ಯಕ್ರಮ ಡಿ. ೫ ರಂದು ಜರುಗಲಿದೆ. ಅಂದು ಬೆಳಿಗ್ಗೆ ೧೦.೩೦ಕ್ಕೆ ಸಮಾಜದ ಅಧ್ಯಕ್ಷ ಕೊಂಗAಡ ಎಸ್. ದೇವಯ್ಯ ಅಧ್ಯಕ್ಷತೆಯಲ್ಲಿ ಸಮಾಜದ ಸಭಾಂಗಣದಲ್ಲಿ ಮಹಾಸಭೆ ಜರುಗಲಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಪರಾಹ್ನ ೧೨ಕ್ಕೆ ನಡೆಯಲಿದೆ. ಮಹಾಸಭೆಯ ಬಳಿಕ ಪುತ್ತರಿ ಊರೊರ್ಮೆ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ ೨.೩೦ಕ್ಕೆ ಕೋಲ್‌ಮಂದ್‌ನಲ್ಲಿ ಕೋಲಾಟ್, ಬೊಳಕಾಟ್, ಉಮ್ಮತ್ತಾಟ್‌ನಂತಹ ಜನಪದ ಪ್ರದರ್ಶನ ನಡೆಯಲಿದ್ದು, ಈ ಬಾರಿ ಮೆರವಣಿಗೆ ಇರುವುದಿಲ್ಲ ಎಂದು ಸಮಾಜದ ಕಾರ್ಯದರ್ಶಿ ಅರೆಯಡ ಪಿ. ರಮೇಶ್ ತಿಳಿಸಿದ್ದಾರೆ.