ಪೊನ್ನಂಪೇಟೆ, ನ.೨೮: ಕಾರ್ತಿಕ ಮಾಸದ ಪ್ರಯುಕ್ತ ಪೊನ್ನಂಪೇಟೆ ಶ್ರೀ ನಂದೀಶ್ವರ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಇಲ್ಲಿನ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಸಾಮೂಹಿಕ ಪೂಜೆ ಏರ್ಪಡಿಸಲಾಗಿತ್ತು. ಪೂಜೆಯ ನಂತರ ಸಂಘದ ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು. ಈ ಸಂದರ್ಭ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.