ಓಮಿಕ್ರಾನ್ ಭೀತಿ - ಮುನ್ನೆಚ್ಚರಿಕೆ ವಹಿಸಲು ಕೇಂದ್ರ ಸೂಚನೆ

ನವದೆಹಲಿ, ನ. ೨೮: ವಿಶ್ವದಾದ್ಯಂತ ಕೋವಿಡ್ ಹೊಸ ತಳಿ' ಓಮಿಕ್ರಾನ್ ಹರಡುವ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಭಾನುವಾರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಲಸಿಕೆ ನೀಡಿಕೆ ಪ್ರಕ್ರಿಯೆಯನ್ನು ಹೆಚ್ಚಿಸುವಂತೆ ಹಾಗೂ ಸೋಂಕು ಹರಡುವಿಕೆ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸುವಂತೆ ಸೂಚಿಸಿದ್ದಾರೆ. ಸೋಂಕು ಹರಡುವಿಕೆ ಕುರಿತು ಸೂಕ್ಷö್ಮ ನಿಗಾ ವಹಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೋವಿಡ್ ತಳಿ ಪತ್ತೆಯಾದ ನಂತರ ಜಗತ್ತಿನಾದ್ಯಂತ ವಿವಿಧ ರಾಷ್ಟçಗಳಲ್ಲಿ ಪ್ರಕರಣಗಳು ವರದಿಯಾಗಿವೆ. ಕೋವಿಡ್-೧೯ ಲಸಿಕೆ ಓಮಿಕ್ರಾನ್ ತಳಿ ವಿರುದ್ಧ ಪರಿಣಾಮಕಾರಿಯೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ಕೋವಿಡ್-೧೯ ಪರಿಸ್ಥಿತಿ ಕುರಿತ ಪರಾಮರ್ಶನ ಸಭೆ ನಡೆದಿತ್ತು. ಭಾನುವಾರ ಬೆಳಿಗ್ಗೆ ವಿವಿಧ ತಜ್ಞರೊಂದಿಗೆ ತುರ್ತು ಸಭೆ ನಡೆಸಿದ ಕೇಂದ್ರ ಗೃಹ ಕಾರ್ಯದರ್ಶಿ, ಓಮಿಕ್ರಾನ್ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಇರುವ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿದರು. ದೇಶದೊಳಗೆ ಬರುವ ವಿದೇಶಿ ಪ್ರವಾಸಿಗರ ಮೇಲಿನ ನಿಗಾ ಹಾಗೂ ಪರೀಕ್ಷೆ ಕುರಿತ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಇದೀಗ ಪರಾಮರ್ಶೆ ನಡೆಸಿರುವುದಾಗಿ ಕೇಂದ್ರ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ

ಕೊಯಮತ್ತೂರು, ನ. ೨೮: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಹಲವರಿಂದ ಲಕ್ಷ, ಲಕ್ಷ ರೂಪಾಯಿ ವಸೂಲಿ ಮಾಡಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಅವರ ಆಪ್ತ ಸಹಾಯಕ(ಪಿಎ)ನನ್ನು ಭಾನುವಾರ ನೆರೆಯ ಸೇಲಂ ಜಿಲ್ಲೆಯ ಓಮಲೂರಿನಲ್ಲಿ ಬಂಧಿಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಹುದ್ದೆ ಕೊಡಿಸುವುದಾಗಿ ಭರವಸೆ ನೀಡಿ ಆಪ್ತ ಸಹಾಯಕ ಮಣಿ ಅವರಿಂದ ೧೭ ಲಕ್ಷ ರೂಪಾಯಿಗಳನ್ನು ಪಡೆದಿದ್ದರು. ಆದರೆ ಕೆಲಸ ಕೊಡಿಸಿಲ್ಲ ಮತ್ತು ತನ್ನ ದೂರು ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ನೆಯ್ವೇಲಿಯ ತಮಿಳ್ಸೆಲ್ವನ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಸೇಲಂ ಕ್ರೆöÊಂ ಬ್ರಾಂಚ್ ಒಂದು ತಿಂಗಳ ಹಿಂದೆ ಮಾಜಿ ಸಿಎಂ ಪಿಎ ವಿರುದ್ಧ ಪ್ರಕರಣ ದಾಖಲಿಸಿತ್ತು. ಮಣಿ ಅವರು ನಿರೀಕ್ಷಣಾ ಜಾಮೀನು ಕೋರಿ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದರು, ಆದರೆ ಕೋರ್ಟ್ ಅವರ ಜಾಮೀನು ಅರ್ಜಿ ತಿರಸ್ಕರಿಸಿದ ನಂತರ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಸಹ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ್ದರಿಂದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮಣಿ ಇನ್ನು ಕೆಲವರಿಂದ ಸರ್ಕಾರಿ ಕೆಲಸ ಕೊಡಿಸುವುದಾಗಿ ೫೦ ಲಕ್ಷ ರೂಪಾಯಿಗೂ ಅಧಿಕ ಹಣ ಪಡೆದಿರುವ ಬಗ್ಗೆ ದೂರುಗಳು ಬಂದಿದ್ದು, ಪೊಲೀಸರು ಮಣಿಯನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ೩೧ ಪಕ್ಷಗಳು ಭಾಗಿ

ನವದೆಹಲಿ, ನ. ೨೮: ಚಳಿಗಾಲದ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ೩೧ ರಾಜಕೀಯ ಪಕ್ಷಗಳಿಂದ ೪೨ ಮುಖಂಡರು ಪಾಲ್ಗೊಂಡಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ತಿಳಿಸಿದ್ದಾರೆ. ಯಾವುದೇ ಅಡಚಣೆಯಿಲ್ಲದೆ ಸ್ಪೀಕರ್ ಹಾಗೂ ಸಭಾಪತಿ ಅನುಮತಿಸಿದ ಯಾವುದೇ ವಿಚಾರಗಳ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದ್ದಾರೆ. ಈ ಮಧ್ಯೆ ಕೃಷಿ ಕಾನೂನುಗಳ ಜಾರಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸಾವಿಗೀಡಾದ ಹಾಗೂ ಕೋವಿಡ್-೧೯ ಸೋಂಕಿನಿAದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡಬೇಕೆಂದು ಪ್ರತಿಪಕ್ಷಗಳು ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದವು. ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳ ರದ್ಧತಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಭೆ ಬಳಿಕ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ತಿಳಿಸಿದರು. ಇಂದಿನಿAದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನ, ಡಿಸೆಂಬರ್ ೨೩ ರಂದು ಕೊನೆಗೊಳ್ಳಲಿದೆ.

ಸಿಎಎ ರದ್ಧತಿಗೆ ಎನ್‌ಡಿಎ ಮೈತ್ರಿ ಪಕ್ಷ ಒತ್ತಾಯ

ನವದೆಹಲಿ, ನ. ೨೮: ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪ್ರಜಾಸತಾತ್ಮಕ ಮೈತ್ರಿಕೂಟದ ಮಿತ್ರಪಕ್ಷಗಳ (ಎನ್‌ಡಿಎ) ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ರದ್ದುಪಡಿಸುವಂತೆ ರಾಷ್ಟಿçÃಯ ಫೀಪಲ್ಸ್ ಪಾರ್ಟಿ ಮುಖಂಡರಾದ ಅಗತಾ ಸಂಗ್ಮಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸಭೆ ಬಳಿಕ ಮಾತನಾಡಿದ ಅಗತಾ ಸಂಗ್ಮಾ, ಜನರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಕೃಷಿ ಕಾನೂನುಗಳನ್ನು ರದ್ದುಪಡಿಸಲಾಗುತ್ತಿದೆ. ಅದೇ ರೀತಿಯಲ್ಲಿ ಈಶಾನ್ಯ ವಲಯದ ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಸಿಎಎ ರದ್ದುಪಡಿಸಬೇಕೆಂದು ಸರ್ಕಾರದ ಬಳಿ ಮನವಿ ಮಾಡಿರುವುದಾಗಿ ತಿಳಿಸಿದರು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಆದರೆ, ಇದನ್ನು ಬೇಡಿಕೆಯನ್ನಾಗಿ ಪರಿಗಣಿಸಲಾಗಿದೆ. ಈಶಾನ್ಯ ಭಾಗದ ಜನರು ಹಾಗೂ ನನ್ನ ಪಕ್ಷದ ಪರವಾಗಿ ಈ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿರುವುದಾಗಿ ಸಂಗ್ಮಾ ಹೇಳಿದ್ದಾರೆ.

ವಿಮಾನ ಸೇವೆ ಪುನರಾರಂಭಿಸುವ ನಿರ್ಧಾರ ಮರು ಪರಿಶೀಲನೆ

ನವದೆಹಲಿ, ನ. ೨೮: ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಅಂರ‍್ರಾಷ್ಟಿçÃಯ ವಾಣಿಜ್ಯ ವಿಮಾನ ಸೇವೆಯನ್ನು ಪುನರಾರಂಭಿಸುವ ನಿರ್ಧಾರವನ್ನು ಮರು ಪರಿಶೀಲಿಸಲು ಕೇಂದ್ರ ಸರ್ಕಾರ ಭಾನುವಾರ ನಿರ್ಧರಿಸಿದೆ. ಇನ್ನೂ ವಿದೇಶದಿಂದ ವಿಶೇಷವಾಗಿ ಅಪಾಯದಲ್ಲಿರುವ ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಪರೀಕ್ಷೆ ಮತ್ತು ಕಣ್ಗಾವಲು ಹೆಚ್ಚಿಸಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಓಮಿಕ್ರಾನ್ ಕೋವಿಡ್ ಹೊಸ ರೂಪಾಂತರಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ಒಂದು ದಿನದ ನಂತರ ಕೇಂದ್ರ ಗೃಹ ಕಾರ್ಯದರ್ಶಿಗಳು ಸಭೆ ನಡೆಸಿದ್ದಾರೆ.

ಬಸ್ ಹರಿದು ಸವಾರ ದುರ್ಮರಣ

ಬೆಂಗಳೂರು, ನ. ೨೮: ಕೆಎಸ್‌ಆರ್‌ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಸರ್ಕಲ್ ಬಳಿ ನಡೆದಿದೆ. ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಹೋಗುತ್ತಿದ್ದ ಬಸ್ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಸವಾರ ಸಾವಿಗೀಡಾಗಿದ್ದಾನೆ. ಅಪಘಾತವಾಗುತ್ತಿದ್ದಂತೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಮೃತ ಸವಾರನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯಕ್ಕೆ ಓಮಿಕ್ರಾನ್ ಪ್ರವೇಶಿಸಿಲ್ಲ

ಬೆಂಗಳೂರು, ನ. ೨೮: ರಾಜ್ಯಕ್ಕೆ ಇನ್ನೂ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರವೇಶಿಸಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿAದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಏರ್‌ಪೋರ್ಟ್ನಲ್ಲಿ ಪ್ರತಿಯೊಬ್ಬರ ಪರೀಕ್ಷೆ ಮಾಡಿಸಿ ಅಲ್ಲಿಯೇ ವರದಿ ನೀಡಲಾಗುತ್ತದೆ. ಪಾಸಿಟಿವ್ ಬಂದವರನ್ನು ಹೊರಗೆ ಬಿಡದೆ ಪ್ರತ್ಯೇಕವಾಗಿಟ್ಟು ಪ್ರಯಾಣಿಕರ ಗಂಟಲು ದ್ರವದ ಜಿನೋಮ್ ಟೆಸ್ಟ್ ಮಾಡಿಸುತ್ತಿದ್ದೇವೆ ಎಂದು ತಿಳಿಸಿದರು. ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಲು ಕೇಂದ್ರ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಜೊತೆ ಮಾತನಾಡಿದ್ದೇನೆ. ಜೀನೋಮಿಕ್ ಸೀಕ್ವೆನ್ಸ್ನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ನೀಡಿದರೆ ವರದಿ ಬರಲು ೮ ರಿಂದ ೧೦ ದಿನಗಳು ಬೇಕಾಗುತ್ತದೆ. ಹೀಗಾಗಿ ಡಿಸೆಂಬರ್ ೧ರ ವೇಳೆಗೆ ಸ್ಪಷ್ಟವಾಗಿ ತಿಳಿದುಬರಲಿದೆ ಎಂದರು.