ಮಡಿಕೇರಿ: ದೇಶದ ಮಹಿಳೆಯರು ಸ್ವಾವಲಂಬಿಯಾಗಿ ಗರ್ವದಿಂದ ಬದುಕಲು ಭಾರತದ ಸಂವಿಧಾನ ಕಾರಣವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷಿö್ಮ ಪಿ. ಹೇಳಿದರು.
ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಕಚೇರಿ ಸಿಬ್ಬಂದಿ ವರ್ಗಕ್ಕೆ ಭಾರತದ ಸಂವಿಧಾನ ಪೀಠಿಕೆಯನ್ನು ಬೋಧಿಸಿ ಅವರು ಮಾತನಾಡಿದರು.
ನಮ್ಮ ಸಂವಿಧಾನ ದೇಶದ ಪರಮೋಚ್ಚ ಗ್ರಂಥವಾಗಿದೆ. ದೇಶದ ಪ್ರತಿಯೊಬ್ಬ ನಾಗರೀಕರಿಗೂ ಸಮಾನತೆಯನ್ನು ಸಂವಿಧಾನ ನೀಡಿದೆ. ಸಂವಿಧಾನ ಅಂಗೀಕಾರವಾದ ದಿನವನ್ನು ರಾಷ್ಟçದ್ಯಂತ ಸಂವಿಧಾನ ದಿನವನ್ನಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ನುಡಿದರು.
ಭಾರತೀಯರೆಲ್ಲರು ಶಾಂತಿ, ಸೌಹಾರ್ದತೆ ಮತ್ತು ಸಮಾನತೆಯಿಂದ ಬಾಳಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಕಾರಣವಾಗಿದೆ. ಸಂವಿಧಾನದಲ್ಲಿನ ಅಂಶಗಳನ್ನು ನಮ್ಮ ಬಾಳಿನಲ್ಲಿಯೂ ಅಳವಡಿಸಿಕೊಳ್ಳಬೇಕು. ಕರ್ತವ್ಯ ಪಾಲನೆ ಸಂಬAಧ ಜಾಗ್ರತೆಯಿಂದ ಜನಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಉಪಕಾರ್ಯದರ್ಶಿ ಅವರು ತಿಳಿಸಿದರು.
ಇದೇ ವೇಳೆ ಕೊಡಗು ಜಿಲ್ಲಾ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿಗಳು ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಅರ್ಥಪೂರ್ಣವಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಮುಖ್ಯ ಯೋಜನಾಧಿಕಾರಿ ರಾಜ್ಗೋಪಾಲ್ ಇತರರು ಹಾಜರಿದ್ದರು.ವೀರಾಜಪೇಟೆ: ಭಾರತ ದೇಶದಲ್ಲಿ ಸಂವಿಧಾನ ಅಮೂಲ್ಯವಾದದ್ದು, ಎಲ್ಲರಿಗೂ ಸಮಾನವಾದ ಹಕ್ಕುಗಳಿವೆ ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎನ್.ವಿ. ಕೋನಪ್ಪ ಹೇಳಿದರು.
ಸಂವಿಧಾನ ದಿನಾಚರಣೆಯ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಗಣಕಯಂತ್ರದ ಸ್ವಿಚ್ ಒತ್ತುವ ಮೂಲಕ ಸಂವಿಧಾನದ ಆಶಯಗಳನ್ನು ತಿಳಿಸುವ ಪ್ರಾತ್ಯಕ್ಷಿಕೆಯ ಸಾಕ್ಷö್ಯಚಿತ್ರ ತೋರಿಸಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದ ಬಳಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ್ದ ವಕೀಲ ಎನ್.ನರೇಂದ್ರ ಕಾಮತ್ ಮಾತನಾಡಿ ಭಾರತದ ಸಂವಿಧಾನ ವಿಶ್ವದಲ್ಲಿಯೇ ಅತಿ ದೊಡ್ಡದು, ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಬೇಕು. ಕಾನೂನು ಉಲ್ಲಂಘನೆ ಆಗಬಾರದು. ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ಶೋಷಣೆ ಮಾಡಬಾರದು. ಹಕ್ಕುಗಳಿಗೆ ತೊಂದರೆಯಾದಾಗ ಪ್ರಶ್ನೆ ಮಾಡುವಂತಾಗಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರದ ನಿಯಮಗಳನ್ನು ಪಾಲಿಸುವ ಮೂಲಕ ಸಂವಿಧಾನದಡಿಯಲ್ಲಿ ಜೀವನವನ್ನು ಉತ್ತಮಗೊಳಿಸುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ, ಟಿ.ಕೆ.ಬೋಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಸರಕಾರದ ನಿಯಮಗಳನ್ನು ತಪ್ಪದೆ ಪಾÀಲಿಸುವ ಮೂಲಕ ಸಂವಿಧಾನಕ್ಕೆ ಚ್ಯುತಿ ಬಾರದ ಹಾಗೆ ಪರಿಪಾಲಿಸಬೇಕು, ಆಗ ಮಾತ್ರ ದೇಶ ಸಧೃಡವಾಗಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ನ್ಯಾಯಾಲಯದ ಸಹಾಯಕ ಬಿ.ಎಸ್.ಜಯಪ್ಪ ಮತ್ತು ಕಾಲೇಜಿನ ಉಪನ್ಯಾಸಕರುಗಳು ಉಪಸ್ಥಿತರಿದ್ದರು.ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಆಚರಿಸಿ ಸಂವಿಧಾನದ ಪೀಠಿಕೆಯನ್ನು ಎಲ್ಲಾ ತರಗತಿಗಳಲ್ಲಿ ಹಾಗೂ ಸಭೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಎನ್.ಸಿ.ಸಿ. ಅಧಿಕಾರಿ ಮೇಜರ್ ಡಾ. ರಾಘವ ಬಿ. ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಪ್ರಾಂಶುಪಾಲ ಡಾ. ಚೌರೀರ ಜಗತ್ ತಿಮ್ಮಯ್ಯ, ರಾಜ್ಯಶಾಸ್ತç ಸಹಪ್ರಾಧ್ಯಾಪಕ ಡಾ. ಶಹಬರ್ ಪಾಷಾ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ರವಿಶಂಕರ್ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದು ಸಾಮೂಹಿಕವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.ಶನಿವಾರಸಂತೆ: ಶನಿವಾರಸಂತೆ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂವಿಧಾನ ದಿನವನ್ನು ಆಚರಿಸಿ, ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಪಿ.ಡಿ.ಒ. ಬಿ.ಜೆ. ಮೇದಪ್ಪ, ಕಾರ್ಯದರ್ಶಿ ತಮ್ಮಯ್ಯಾಚಾರ್, ಸಿಬ್ಬಂದಿ ಫೌಜಿಯಾ, ಲೀಲಾವತಿ, ಧರ್ಮಪ್ಪ, ಸಂಜೀವಿನಿ, ಸ್ವಸಹಾಯ ಸಂಘದ ಅಧ್ಯಕ್ಷೆ ಚಂದ್ರಕಲಾ ಹಾಜರಿದ್ದರು.ಪೊನ್ನಂಪೇಟೆ: ಇಲ್ಲಿನ ಕುಶಾಲಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಮುಖ್ಯ ಶಿಕ್ಷಕ ಅಮ್ಮತ್ತೀರ ಎಸ್. ವಾಸುವರ್ಮ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ಞಾವಿಧಿ ಬೋಧಿಸಿ, ಸಂವಿಧಾನದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಈ ಸಂದರ್ಭ ಸಹ ಶಿಕ್ಷಕಿ ಸಿ.ಎಂ. ಹರಿಣಾಕ್ಷಿ ಹಾಗೂ ಅಡುಗೆ ಸಿಬ್ಬಂದಿ ಹಾಜರಿದ್ದರು.ಸೋಮವಾರಪೇಟೆ: ತಾಲೂಕು ಆಡಳಿತದ ವತಿಯಿಂದ ಸಮೀಪದ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.
ತಾಲೂಕು ತಹಶೀಲ್ದಾರ್ ಗೋವಿಂದರಾಜು ಅವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಸೋಮವಾರಪೇಟೆ: ತಾಲೂಕು ಆಡಳಿತದ ವತಿಯಿಂದ ಸಮೀಪದ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.
ತಾಲೂಕು ತಹಶೀಲ್ದಾರ್ ಗೋವಿಂದರಾಜು ಅವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವೀರಾಜಪೇಟೆಯ ವಕೀಲೆ ಬಿ. ಅನುಪಮ ಕಿಶೋರ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾವೇರಿ ಕಾಲೇಜು ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ ವಿದ್ಯಾರ್ಥಿಗಳಿಗೆ ಸಂವಿಧಾನ ದಿನದ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಅತ್ಯಂತ ಮಹತ್ವದ ಸಂವಿದಾನವನ್ನು ನೀಡಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನಕ್ಕೆ ತಲೆಬಾಗಲೇಬೇಕು ಎಂದರು. ವಿದ್ಯಾರ್ಥಿ ರಾಚಯ್ಯ ಪ್ರಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ಕೆ.ಟಿ. ಸೀತಮ್ಮ, ಉಪನ್ಯಾಸಕರಾದ ಸಿ.ಟಿ. ಕಾವ್ಯ, ಎಂ.ಎನ್. ವನಿತ್ ಕುಮಾರ್ ಹಾಜರಿದ್ದರು. ವಿದ್ಯಾರ್ಥಿನಿ ಲೀಟಾ ಪ್ರಾರ್ಥಿಸಿ, ಸ್ನೇಹ ಸ್ವಾಗತಿಸಿ, ನಿಸರ್ಗ ವಂದಿಸಿದರು. ಸಂಜೀವ್ ನಿರೂಪಿಸಿದರು.ಗೋಣಿಕೊಪ್ಪಲು: ಗೋಣಿಕೊಪ್ಪಲುವಿನ ಲಯನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲೆ ಸಿ.ಬಿ. ಲತಾ ಪ್ರಾಸ್ತಾವಿಕವಾಗಿ ಮಾತನಾಡಿ, ಸಂವಿಧಾನದ ಮೂಲ ಉದ್ದೇಶಗಳನ್ನು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲೆ ಪ್ರತಿಷ್ಠ ಮಾದಯ್ಯ ಹಾಗೂ ಕಂಜಿತAಡ ಅನಿತಾ ದೇವಯ್ಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಂವಿಧಾನ ದಿನದ ಮಹತ್ವ ಹಾಗೂ ಪ್ರಜೆಗಳ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಮಾಹಿತಿ ಒದಗಿಸಿದರು. ಉಪನ್ಯಾಸಕಿ ಹೇಮಾವತಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಲಯನ್ಸ್ ಪ್ರೌಢಶಾಲೆಯ ಸಹಾಯಕ ಮುಖ್ಯೋಪಾಧ್ಯಾಯಿನಿ ಕವಿತ ವಂದಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಕೂಡಿಗೆ: ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಶಾಲೆಯ ಪ್ರಾಂಶುಪಾಲ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಿ ಪ್ರತಿಜ್ಞೆ ಸ್ವೀಕರಿಸಲಾಯಿತು.ಯಡೂರು: ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ನಡೆಯಿತು.
ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ಪ್ರೊ. ಕೆ.ಹೆಚ್. ಧನಲಕ್ಷಿö್ಮÃ ಮಾತನಾಡಿ, ನಮ್ಮ ಸಂವಿಧಾನವು ವಿಶ್ವದಲ್ಲಿಯೇ ವಿಶಿಷ್ಟವಾದ ಸಂವಿಧಾನವಾಗಿದ್ದು ಒಬ್ಬ ನಾಗರಿಕ ಗೌರವಯುತವಾಗಿ ಬದುಕಿ ಬಾಳಲು ಅವಶ್ಯಕವಿರುವ ಎಲ್ಲ ಹಕ್ಕು ಮತ್ತು ಕರ್ತವ್ಯಗಳನ್ನು ಒಳಗೊಂಡಿದೆ. ಇಂತಹ ಸಂವಿಧಾನವನ್ನು ದೇಶಕ್ಕೆ ಸಮರ್ಪಿಸಿದ ದಿನದ ಸ್ಮÀ್ಮರಣೆಗಾಗಿ ಸಂವಿಧಾನದ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಸಂವಿಧಾನದ ಆಶಯಗಳಿಗನುಗುಣವಾಗಿ ನಡೆಯುವ ಹೊಣೆಗಾರಿಕೆ ಎಲ್ಲ ನಾಗರಿಕರ ಮೇಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಹೆಚ್.ಎನ್. ರಾಜು ವಹಿಸಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ಎಂ.ಎಸ್. ಶಿವಮೂರ್ತಿ, ಉಪನ್ಯಾಸಕರಾದ ಎಂ.ಎಸ್. ಸುನಿಲ್, ಕೆ. ಪಾಪಣ್ಣ, ಎನ್.ಪಿ. ಧರ್ಮ, ಹೆಚ್.ಎ. ಶೈಲಾ, ಬಿ.ಜೆ. ಆಶಿಕ, ಡಿ.ಜಿ. ಸಂಗೀತ ಸೇರಿದಂತೆ ಇತರರು ಉಪಸ್ಥಿತರಿದ್ದರು.ಕೂಡಿಗೆ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶ್ರೀ ಸದ್ಗುರು ಅಪ್ಪಯ್ಯ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ದುರ್ಗೇಶ್ ವಹಿಸಿದ್ದರು.
ಶಿಕ್ಷಕ ಎಸ್.ಎಸ್. ಶಿವಪ್ರಸಾದ್ ಸಂವಿಧಾನದ ಮಹತ್ವವನ್ನು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭ ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳಿಂದ ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿಯಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಈ ಸಂದರ್ಭ ಸಂವಿಧಾನ ಪ್ರತಿಯನ್ನು ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಓದಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ವಿಶಾಲ್ ಕುಮಾರ್ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ನಂಜುAಡೇಗೌಡ ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.