ಕೂಡಿಗೆ, ನ. ೨೮: ಕೊಡಗು ಜಿಲ್ಲೆಯಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಎಂ, ಪಿ, ಕುಶಾಲಪ್ಪ (ಸುಜು) ಅವರು ಕೂಡಿಗೆ ಕೂಡುಮಂಗಳೂರು ಹೆಬ್ಬಾಲೆ ತೊರೆನೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿ ಗಳಿಗೆ ಭೇಟಿ ನೀಡಿ ಗ್ರಾಮ ಪಂಚಾಯತಿ ಸದಸ್ಯರು ಗಳನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬಿ.ಬಿ. ಭಾರತೀಶ್, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಕಾರ್ಯದರ್ಶಿ ಅರುಣ್ ಭೀಮಯ್ಯ, ಮಾದಪ್ಪ, ಉಪಾಧ್ಯಕ್ಷ ವಿ.ಕೆ. ಲೋಕೇಶ್, ಸೋಮವಾರಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಯಮುನಾ ಚಂಗಪ್ಪ ಮತ್ತಿತರರು ಪಾಲ್ಗೊಂಡಿದ್ದರು.