ಮಡಿಕೇರಿ, ನ. ೨೯: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೧-೨೨ನೇ ಸಾಲಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ತಾ. ೩೦ ರಂದು (ಇಂದು) ಬೆಳಿಗ್ಗೆ ೧೦.೩೦ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ. ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆ ವಿಶೇಷಾಧಿಕಾರಿ ಪ್ರೊ. ಸ್ಟೀವನ್ ಕ್ವಾಡ್ರಸ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.