ಮಡಿಕೇರಿ, ನ, ೨೯ : ಕೊಡಗು ಜಿಲ್ಲಾ ಬಹುಜನ ಸಮಾಜ ಪಕ್ಷದ ವತಿಯಿಂದ, ಶಿಕ್ಷಣ ಕ್ರಾಂತಿಯ ಹರಿಕಾರ ಜ್ಯೋತಿ ಬಾ ಪುಲೆಯವರ ೧೩೧ನೇ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಸೋಮವಾರಪೇಟೆ ಯಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಪಕ್ಷದ ಜಿಲ್ಲಾಧ್ಯಕ್ಷರೂ ಆದ ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಸಿದ್ದಪ್ಪ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಜಯಪ್ಪ ಹಾನಗಲ್, ಜಿಲ್ಲಾ ಸಂಯೋಜಕ ಮಹಮ್ಮದ್ ಕುಂಞÂ ಎಸ್‌ಇ, ಜಿಲ್ಲಾ ಉಪಾಧ್ಯಕ್ಷ ಜೋಯಪ್ಪ ಭಾಗವಹಿಸಿದ್ದರು.