ಗೋಣಿಕೊಪ್ಪಲು, ನ.೨೯: ಕೇರಳ ಮತ್ತು ಕರ್ನಾಟಕ ರಾಜ್ಯ ಗಡಿ ಭಾಗವಾದ ಮಾಕುಟ್ಟ ಮಾರ್ಗವಾಗಿ ಗಡಿ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಬೇಕೆಂದು ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ತೀರ್ಮಾನವನ್ನು ಬಿಜೆಪಿ ಪಕ್ಷದ ತಾಲೂಕು ವಕ್ತಾರರಾದ ಕುಟ್ಟಂಡ ಅಜಿತ್ ಕುರುಂಬಯ್ಯ ಹಾಗೂ ಪುಲಿಯಂಡ ಪೊನ್ನಣ್ಣ ವಿರೋಧಿಸಿದ್ದಾರೆ.
ಕೊರೊನಾ ಮಹಾಮಾರಿಯನ್ನು ಹತೋಟಿಗೆ ತರಲು ಸರ್ಕಾರ ವಿವಿಧ ರೀತಿಯ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹತೋಟಿಗೆ ತರಲು ಸಾಧ್ಯವಾಗಿದೆ. ಸರ್ಕಾರ ಈ ಬಗ್ಗೆ ದಿಟ್ಟ ಕ್ರಮ ಕೈಗೊಳ್ಳದಿದ್ದಲ್ಲಿ ಅನೇಕ ಅನಾಹುತಗಳು ಸಂಭವಿಸುತ್ತಿತ್ತು. ಆದರೆ ಇವುಗಳನ್ನು ಮನಗಾಣದ ಕಾಂಗ್ರೆಸ್ ಪಕ್ಷದ ನಾಯಕರು ಕೇರಳ ಗಡಿಯನ್ನು ಮುಕ್ತಗೊಳಿಸುವಂತೆ ಪ್ರತಿಭಟಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.