ಮಡಿಕೇರಿ, ನ.೨೯ : ದೇಶದ ಪ್ರಗತಿ ಮತ್ತು ಮಹಿಳಾ ಸಮೂಹಕ್ಕೆ ಸ್ಫೂರ್ತಿಯಾಗಿದ್ದ ಮಾಜಿ ಪ್ರಧಾನಿ ಇಂದಿರಾಗಾAಧಿ ಅವರ ಸಾಮಾಜಿಕ ಕಳಕಳಿಯ ಕಾರ್ಯಗಳು ಅವಿಸ್ಮರಣೀಯವೆಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾAಧಿ ಅವರ ೧೦೪ ನೇ ಜನ್ಮ ದಿನವನ್ನು ಆಚರಿಸಲಾಯಿತು. ಇಂದಿರಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ವೀಣಾಅಚ್ಚಯ್ಯ ದೇಶದ ಪ್ರಗತಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದ ಇಂದಿರಾಗಾAಧಿ ಅವರು ಒಬ್ಬ ವ್ಯಕ್ತಿಯಾಗಿರಲಿಲ್ಲ, ಶಕ್ತಿಯಾಗಿದ್ದರು ಎಂದು ಬಣ್ಣಿಸಿದರು.
ಇಂದಿರಾ ಸಾಧನೆಗಳನ್ನು ಯುವ ಪೀಳಿಗೆಗೆ ಮನವರಿಕೆ ಮಾಡಿಕೊಡುವ ಕಾರ್ಯವನ್ನು ಕಾಂಗ್ರೆಸ್ಸಿಗರು ಮಾಡಬೇಕೆಂದು ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ ಸುಮಾರು ೧೭ ವರ್ಷಗಳ ಕಾಲ ದೇಶವನ್ನು ಆಳಿದ ಉಕ್ಕಿನ ಮಹಿಳೆ ಎಂದೇ ಹೆಸರಾಗಿದ್ದ ಇಂದಿರಾ ಅವರ ಸಾಧನೆ ವಿಶ್ವಕ್ಕೇ ಮಾದರಿಯಾಗಿದೆ ಎಂದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಮುನೀರ್ ಅಹಮ್ಮದ್, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಪದಾಧಿಕಾರಿ ಭಾಗ್ಯ ಭೀಮಯ್ಯ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರಮೈನಾ ಮಾತಾನಾಡಿದರು. ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಸ್ವಾಗತಿಸಿ, ಇಂದಿರಾಗಾAಧಿ ಅವರ ಜನಪರ ಕಾರ್ಯಗಳ ಕುರಿತು ವಿವರಿಸಿದರು.
ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಸೂರಜ್ ಹೊಸೂರು, ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ನಗರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸದಾಮುದ್ದಪ್ಪ, ನಗರಸಭಾ ಮಾಜಿ ಸದಸ್ಯರುಗಳಾದ ಪ್ರಕಾಶ್ ಆಚಾರ್ಯ, ಕೆ.ಜೆ.ಪೀಟರ್, ಸೇವಾದಳದ ಪ್ರಧಾನ ಕಾರ್ಯದರ್ಶಿ ಥೆರೆಸಾ ವಿಕ್ಟರ್, ಜಿಲ್ಲಾ ಕಾಂಗ್ರೆಸ್ ಮಾಜಿ ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಸ್ವರ್ಣಲತಾ, ಪ್ರೇಮ, ಬೇಗಂ, ಮಧು, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನಾಪಂಡ ರವಿ, ಧ್ರುವÀಕುಮಾರ್, ಪಿಯುಷ್ ಪೆರೆರಾ, ಜೆ.ಸಿ.ಜಗದೀಶ್, ಪುಷ್ಪ ಪೂಣಚ್ಚ, ಹನೀಫ್ ಎಸ್.ಎ, ಪಿ.ಎಲ್.ಸುರೇಶ್, ರಿಯಾಜ್, ಮಹಮ್ಮದ್ ಹನೀಫ್, ಎ.ಜಯರಾಜ್ ಉಪಸ್ಥಿತರಿದ್ದರು. ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್ ವಂದಿಸಿದರು.