ಮಡಿಕೇರಿ, ನ. ೨೯: ಪೊನ್ನಂಪೇಟೆ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ೧೧ ಕೆವಿ ನಲ್ಲೂರು ಮತ್ತು ಬಾಳೆಲೆ ಫೀಡರ್‌ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ತಾ. ೩೦ ರಂದು (ಇಂದು) ಬೆಳಿಗ್ಗೆ ೯ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ಬಾಳೆಲೆ, ನಲ್ಲೂರು, ಕಾನೂರು, ಕಿರುಗೂರು, ಪೊನ್ನಪ್ಪಸಂತೆ, ಸುಳುಗೋಡು, ಬೆಸಗೂರು ಮತ್ತೂರು, ರಾಜಾಪುರ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.