ಮಡಿಕೇರಿ, ನ.೨೯ : ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ೨೦೧೯- ೨೦, ೨೦೨೦- ೨೧ ನೇ ಸಾಲಿನ ವಾರ್ಷಿಕ ಮಹಾಸಭೆ ಡಿ.೬ ರಂದು ಬೆಳಗ್ಗೆ ೧೧ ಗಂಟೆಗೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಮತ್ತು ಗ್ರಾ.ಪಂ ಹಾಗೂ ಸಹಕಾರ ಸಂಘಗಳ ಚುನಾವಣೆಯಲ್ಲಿ ಜಯಗಳಿಸಿದ ಒಕ್ಕಲಿಗ ಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂಘದ ಉಪಾಧ್ಯಕ್ಷ ವಿ.ಪಿ.ಸುರೇಶ್ ತಿಳಿಸಿದ್ದಾರೆ.