ಅಶಿಸ್ತಿನ ವರ್ತನೆ : ಸಂಸದರುಗಳ ಅಮಾನತು

ನವದೆಹಲಿ, ನ. ೨೯: ಇಂದಿನಿAದ ಆರಂಭಗೊAಡ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ೧೨ ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡಿರುವ ೧೨ ಮಂದಿ ಸಂಸದರ ಪೈಕಿ ಆರು ಮಂದಿ ಕಾಂಗ್ರೆಸ್, ಟಿಎಂಸಿಯ ತಲಾ ಇಬ್ಬರು ಮತ್ತು ಶಿವಸೇನೆ ಹಾಗೂ ಸಿಪಿಎಂ ಮತ್ತು ಸಿಪಿಐನಿಂದ ತಲಾ ಒಬ್ಬರು ಸೇರಿದ್ದಾರೆಂದು ತಿಳಿದುಬಂದಿದೆ. ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್ ಅವರು ಸದಸ್ಯರ ಅಮಾನತು ಘೋಷಿಸಿ ಸದನವನ್ನು ಮಂಗಳವಾರಕ್ಕೆ ಮುಂದೂಡಿದರು. ಕಾಂಗ್ರೆಸ್‌ನ ಫೂಲೋ ದೇವಿ ನೇತಮ್, ಛಾಯಾ ವರ್ಮಾ, ರಿಪುನ್ ಬೋರಾ, ರಾಜಮಣಿ ಪಟೇಲ್, ಸೈಯದ್ ನಾಸಿರ್ ಹುಸೇನ್ ಮತ್ತು ಅಖಿಲೇಶ್ ಪ್ರಸಾದ್ ಸಿಂಗ್ ಅಮಾನತುಗೊಂಡಿದ್ದಾರೆ. ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ ಮತ್ತು ಅನಿಲ್ ದೇಸಾಯಿ, ಟಿಎಂಸಿಯ ಡೋಲಾ ಸೇನ್ ಮತ್ತು ಶಾಂತಾ ಛೆಟ್ರಿ, ಸಿಪಿಎಂನಿAದ ಎಲಮರಮ್ ಕರೀಂ ಮತ್ತು ಸಿಪಿಐನಿಂದ ಬಿನೋಯ್ ವಿಶ್ವಂ ಅವರು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡ ವಿರೋಧ ಪಕ್ಷದ ಸಂಸದರಾಗಿದ್ದಾರೆ. ಕಳೆದ ಆಗಸ್ಟ್ ತಿಂಗಳಲ್ಲಿ ನಡೆದ ಸಂಸತ್ ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ನಿಯಮ ದುರುಪಯೋಗ ಹಾಗೂ ಅಶಿಸ್ತಿನಿಂದ ನಡೆದುಕೊಂಡಿರುವ ಕಾರಣ ಸದಸ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಪೆಗಾಸಸ್, ಕೃಷಿ ಕಾಯ್ದೆ ಮಸೂದೆ ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ನಿರಂತರವಾಗಿ ಸದನಕ್ಕೆ ಅಡ್ಡಿಪಡಿಸಲಾಗುತ್ತಿತ್ತು. ಈ ವಿಷಯಕ್ಕೆ ಸಂಬAಧಿಸಿದAತೆ ಇಂದು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೃಷಿ ಮಸೂದೆ ರದ್ದು : ಉಭಯ ಸಂಸತ್ತಿನಲ್ಲಿ ಅಂಗೀಕಾರ

ನವದೆಹಲಿ, ನ. ೨೯: ಮಳೆ, ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಕಳೆದ ಒಂದು ವರ್ಷದಿಂದ ನಡೆಸುತ್ತಿರುವ ರೈತರ ಪ್ರತಿಭಟನೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸೋಮವಾರ ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಿದೆ. ಇಂದಿನಿAದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಲೋಕಸಭೆ ಕಲಾಪ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆ ೨೦೨೧ ಅನ್ನು ಅಂಗೀಕರಿಸಲಾಯಿತು. ಮಧ್ಯಾಹ್ನ ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದAತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕೃಷಿ ಕಾನೂನುಗಳ ರದ್ದತಿ ಮಸೂದೆ ೨೦೨೧ ಅನ್ನು ಮಂಡಿಸಿದರು. ಮಸೂದೆ ಅಂಗೀಕರಿಸುವ ಮುನ್ನ ಉಪ ಸಭಾಪತಿ ಹರಿವಂಶ ಅವರು, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎರಡು ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಿದರು. ಇತ್ತೀಚಿನ ಉಪಚುನಾವಣೆಗಳ ಫಲಿತಾಂಶಗಳನ್ನು ಪರಿಶೀಲಿಸಿದ ನಂತರ ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದಿದೆ ಎಂದು ಖರ್ಗೆ ಹೇಳಿದರು. ಮಸೂದೆ ಮಂಡಿಸಿ ಮಾತನಾಡಿದ ತೋಮರ್ ಅವರು, ಮೂರು ಕಾನೂನುಗಳನ್ನು ರೈತರ ಅನುಕೂಲಕ್ಕಾಗಿ ತರಲಾಗಿದೆ. ಆದರೆ ಧರಣಿ ನಿರತ ರೈತರಿಗೆ ಈ ಕಾನೂನಿನ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಿಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಕಾಂಗ್ರೆಸ್ ಮತ್ತು ಟಿಎಂಸಿ ಸದಸ್ಯರ ಪ್ರತಿಭಟನೆಯ ನಡುವೆಯೇ ಧ್ವನಿ ಮತದ ಮೂಲಕ ಕೃಷಿ ಕಾನೂನುಗಳ ರದ್ದತಿ ಮಸೂದೆ ೨೦೨೧ ಅಂಗೀಕರಿಸಲಾಯಿತು.

ಸರ್ಕಾರದ ಮುಂದೆ ಲಾಕ್‌ಡೌನ್ ಪ್ರಸ್ತಾವನೆ ಇಲ್ಲ

ದಾವಣಗೆರೆ, ನ. ೨೯: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಕುರಿತು ಜನತೆ ಭಯಪಡದೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ರೂಪಾಂತರಿ ವೈರಸ್ ಕಂಡುಬAದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಿದ್ದು, ಅವರ ಸಂಪರ್ಕಿತರ ಪತ್ತೆ ಹಚ್ಚಿ ಪರೀಕ್ಷಿಸಲಾಗುತ್ತಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿಯೂ ಕಟ್ಟುನಿಟ್ಟಿನ ಪರೀಕ್ಷೆ ಮಾಡುತ್ತಿದ್ದು, ನೆಗೆÀಟಿವ್ ಇದ್ದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಕೇರಳದಿಂದ ಆಗಮಿಸಿರುವ ವಿದ್ಯಾರ್ಥಿಗಳು ಆಗಮಿಸುವವರಿಗೆ ನೆಗೆಟಿವ್ ವರದಿ ಕಡ್ಡಾಯ ಹಾಗೂ ೭ನೇ ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಜನರು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು. ಸರ್ಕಾರ ನಿರಂತರವಾಗಿ ತಜ್ಞರು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಕಾಲಕಾಲಕ್ಕೆ ಅವರು ನೀಡುವ ನಿರ್ದೇಶನದಂತೆ ಕ್ರಮ ವಹಿಸಲಾಗುವುದು, ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ ವ್ಯಕ್ತಿಗೆ ವಿಭಿನ್ನ ಲಕ್ಷಣಗಳು ಕಂಡುಬAದಿರುವ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಾಗಿ ಐ.ಸಿ.ಎಂ.ಆರ್.ಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಯಾವ ತಳಿ ಎಂದು ತಿಳಿಯಲಿದೆ ಎಂದರು.

ವೈದ್ಯರಿಗೆ ರಿಸ್ಕ್ ಭತ್ಯೆ ಪಾವತಿಗೆ ಕ್ರಮ

ಬೆಂಗಳೂರು, ನ. ೨೯: ಮುಂದಿನ ಎರಡು-ಮೂರು ದಿನಗಳಲ್ಲಿ ಎಲ್ಲಾ ವೈದ್ಯರಿಗೂ ರಿಸ್ಕ್ ಭತ್ಯೆ ಪಾವತಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಕೋವಿಡ್ ರಿಸ್ಕ್ ಭತ್ಯೆ ಪಾವತಿ ವಿಳಂಬದ ಕುರಿತು ವಿಕ್ಟೋರಿಯಾ ಆಸ್ಪತ್ರೆ ಬಳಿ ನಡೆದ ಪ್ರತಿಭಟನೆ ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮೆಡಿಕಲ್ ಕಾಲೇಜುಗಳಿಗೆ ರಿಸ್ಕ್ ಭತ್ಯೆಯ ಒಟ್ಟು ೭೩ ಕೋಟಿ ರೂಪಾಯಿ ಮೊತ್ತದ ಮಂಜೂರು ಪ್ರಕ್ರಿಯೆಗಳು ಇಂದು ಪೂರ್ಣಗೊಳ್ಳಲಿವೆ ಎಂದು ಅವರು ತಿಳಿಸಿದ್ದಾರೆ.

ಅಫ್ಘಾನಿಸ್ತಾನ - ಶಿಕ್ಷಣ ಕೇಂದ್ರಗಳಿಗೆ ಬೀಗ

ಕಾಬೂಲ್, ನ. ೨೯: ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಾಗಿನಿAದ ಕಳೆದ ಮೂರು ತಿಂಗಳಲ್ಲಿ ಶೇ. ೫೦ ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಮುಚ್ಚಲ್ಪಟ್ಟಿರುವುದಾಗಿ ಖಾಸಗಿ ಶಿಕ್ಷಣ ಕೇಂದ್ರಗಳ ಯೂನಿಯನ್ ಹೇಳಿಕೆ ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಯೂನಿಯನ್ ಪ್ರಕಾರ, ಕುಟುಂಬಗಳ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಈ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಚ್ಚಲು ಪ್ರಮುಖ ಕಾರಣವಾಗಿದೆ. ಅಫ್ಘಾನಿಸ್ತಾನದಲ್ಲಿ ಆಡಳಿತ ಬದಲಾವಣೆ ನಂತರ ಶೇಕಡ ೪೦ ರಿಂದ ೫೦ ರಷ್ಟು ಶಿಕ್ಷಣ ಸಂಸ್ಥೆಗಳು ತಮ್ಮ ಚಟುವಟಿಕೆಗಳನ್ನು ನಿಲ್ಲಿಸಿವೆ. ಇದರಿಂದಾಗಿ ಶಿಕ್ಷಣ ಕೇಂದ್ರಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿರುವುದಾಗಿ ಯೂನಿಯನ್ ಮುಖ್ಯಸ್ಥ ಸಂಜರ್ ಖಲೀದ್ ಹೇಳಿದ್ದಾರೆ.

ಭಾರತದ ಪ್ರಯಾಣಿಕರಿಗೆ ಹೇರಿದ್ದ ನಿರ್ಬಂಧ ಹಿಂಪಡೆತ

ತಿರುವನAತಪುರA, ನ. ೨೯: ಭಾರತದಿಂದ ಬರುವ ಪ್ರಯಾಣಿಕರ ಮೇಲೆ ಹೇರಲಾಗಿದ್ದ ನಿಷೇಧವನ್ನು ಸೌದಿ ಅರೇಬಿಯಾ ಹಿಂಪಡೆದಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಕೇರಳ ಹೈಕೋರ್ಟ್ ಗೆ ತಿಳಿಸಿದೆ. ಗಲ್ಫ್ ರಾಷ್ಟçಕ್ಕೆ ಕೆಲಸಕ್ಕಾಗಿ ಮರಳಲು ಅಂರ‍್ರಾಷ್ಟಿçÃಯವಾಗಿ ಮಾನ್ಯತೆ ಪಡೆದ ಮೂರನೇ ಡೋಸ್ ಲಸಿಕೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ವಿಚಾರಣೆ ವೇಳೆ ವೇಳೆಯಲ್ಲಿ ಕೇಂದ್ರ ಸರ್ಕಾರ ಈ ರೀತಿಯಲ್ಲಿ ಮಾಹಿತಿ ನೀಡಿದೆ. ಅರ್ಜಿದಾರ ವ್ಯಕ್ತಿ ಎರಡು ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದರೂ ಆರಂಭದಲ್ಲಿ ಸೌದಿ ಅರೇಬಿಯಾದಿಂದ ಮಾನ್ಯತೆಯಾಗಿರಲಿಲ್ಲ. ಆದ್ದರಿಂದ ಅವರು, ಕೋವಿಶೀಲ್ಡ್ ನಂತರ ಅಂರ‍್ರಾಷ್ಟಿçÃಯವಾಗಿ ಮಾನ್ಯತೆ ಪಡೆದ ಮೂರನೇ ಲಸಿಕೆ ಹಾಕುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿದಾರ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಗಲ್ಫ್ ರಾಷ್ಟçದಲ್ಲಿ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದರು.