ಮಡಿಕೇರಿ, ನ.೨೯ : ಕೋವಿಡ್ ಸೋಂಕಿನ ೩ನೇ ಅಲೆ ಮತ್ತೆ ಆತಂಕ ವನ್ನು ಸೃಷ್ಟಿಸಿದ್ದು, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕೊಡಗಿನ ಶಾಲಾ, ಕಾಲೇಜುಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಪವನ್ ಪೆಮ್ಮಯ್ಯ, ರಾಜ್ಯದ ವಿವಿಧೆಡೆ ಕೋವಿಡ್ ವ್ಯಾಪಿಸುತ್ತಿದ್ದು, ಹೊಸ ವೈರಸ್ “ಒಮಿ ಕ್ರಾನ್” ಕೂಡ ಆತಂಕ ಮೂಡಿಸಿದೆ. ಕೇರಳದಲ್ಲಿ ಸೋಂಕು ಹೆಚ್ಚುತ್ತಿದ್ದು, ಪಕ್ಕದ ಕೊಡಗಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೆಲವು ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಜ್ವರ ಕಾಣಿಸಿ ಕೊಂಡಿದ್ದು, ಜಿಲ್ಲಾಡಳಿತ ಈ ಪ್ರಕರಣಗಳನ್ನು ಆದ್ಯತೆಯಲ್ಲಿ ಪರಿಗಣಿಸಬೇಕು. ಶಾಲಾ, ಕಾಲೇಜು ಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷೆಗೆ ಆದ್ಯತೆ ನೀಡಬೇಕು ಮತ್ತು ಕೋವಿಡ್ ನಿಯಮಾನುಸಾರ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಬಳಸುವು ದನ್ನು ಕಡ್ಡಾಯ ಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಸೋಂಕು ವ್ಯಾಪಿಸುತ್ತಿರುವು ದರಿಂದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರ ಈಗಾಗಲೇ ಸೂಚನೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರ ಅದರಲ್ಲೂ ವಿದೇಶಗಳಿಂದ ಆಗಮಿಸುತ್ತಿರುವ ಪ್ರವಾಸಿಗರ ಮೇಲೆ ಹೆಚ್ಚಿನ ನಿಗಾವಹಿಸುವ ಅಗತ್ಯವಿದೆ ಎಂದು ಸಲಹೆಯಿತ್ತಿದ್ದಾರೆ.