ಮಡಿಕೇರಿ, ನ. ೩೦: ಭಾಗಮಂಡಲ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಜಾಗೃತಿ ಅಭಿಯಾನ, ಸ್ವಚ್ಛ ಭಾರತ್ ಮಿಷನ್ ಹಾಗೂ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನದ ಜಂಟಿ ಕಾರ್ಯಕ್ರಮ ನಡೆಯಿತು.

ನರೇಗಾ ತಾಲೂಕು ಐ.ಇ.ಸಿ ಸಂಯೋಜಕಿ ಅಕ್ಷಿತ ಕೆ.ಡಿ. ಮಾತನಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ನರೇಗಾ ಒಂದು ಕಾಯ್ದೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಕುಶಲ ಕಾರ್ಮಿಕರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವುದು ಹಾಗೂ ವೈಯಕ್ತಿಕ ಸೌಲಭ್ಯದ ಮೂಲಕ ಆರ್ಥಿಕವಾಗಿ ಬಲವರ್ಧನೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಜಾಬ್ ಕಾರ್ಡ್ ಪ್ರಧಾನವಾಗಿದ್ದು, ಕೂಡಲೇ ಜಾಬ್ ಕಾರ್ಡ್ ಮಾಡಿಸಿಕೊಳ್ಳಿ ಎಂದರು. ಜೊತೆಗೆ ನರೇಗಾದ ವಿವಿಧ ಸೌಲಭ್ಯದ ಕುರಿತಂತೆ ಮಾಹಿತಿ ನೀಡಲಾಯಿತು.

ಎಮ್.ಜಿ.ಎನ್.ಎಫ್ ವಿರೇಶ್, ಸಂಜೀವಿನಿ ಒಕ್ಕೂಟದ ಸದಸ್ಯರ ಉದ್ಯಮ ಶೀಲತೆಯನ್ನು ಹೆಚ್ಚಿಸಲು ಜೇನು ಸಾಕಾಣಿಕೆ, ಟೈಲರಿಂಗ್, ಹೈನುಗಾರಿಕೆ, ಪಶುಸಂಗೊನರೇಗಾ ಯೋಜನೆ ಸದುಪಯೋಗಪಡಿಸಿಕೊಳ್ಳಲು ಕರೇಪನೆ, ಕೈಕುಶಲ, ಕಂಪ್ಯೂಟರ್ ಕಲಿಕೆ, ಮೆಕ್ಯಾನಿಕ್ ಮುಂತಾದ ವಿಭಿನ್ನ ಜೀವನೋಪಾಯ ಚಟುವಟಿಕೆಗಳಿಗೆ ತರಬೇತಿ ನೀಡಲಾಗುತ್ತಿದ್ದು ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.ಅಲ್ಲದೆ ತಮ್ಮ ಆಹಾರ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಅವಕಾಶವಿದ್ದು, ಸ್ವಂತ ಬ್ರಾಂಡ್ ಅನ್ನು ಹುಟ್ಟು ಹಾಕಬಹುದು ಎಂದು ಹೇಳಿದರು.

ಇದೆ ಸಂದರ್ಭ ಸ್ವಚ್ಛ ಭಾರತ ಸಮಾಲೋಚಕ ವಾಸುದೇವ್, ಸ್ವಚ್ಛತೆ ನಮ್ಮ ಆದ್ಯ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರ ಪಾತ್ರ ಮುಖ್ಯ. ಘನ ಮತ್ತು ದ್ರವ ತ್ಯಾಜ್ಯ ವಸ್ತು ವಿಲೇವಾರಿ ಕಾಮಗಾರಿಗಳನ್ನು ನರೇಗಾ

ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಒಗ್ಗೂಡಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿಯೊಬ್ಬರು ಬಚ್ಚಲುಗುಂಡಿಯನ್ನು ಮಾಡಿಸಿಕೊಳ್ಳಬೇಕು. ಕಸ ವಿಲೇವಾರಿ ಘಟಕವನ್ನು ಸ್ಥಾಪಿಸಲಾಗಿದೆ. ಅಪೇಕ್ಷಣೀಯ ರೀತಿಯಲ್ಲಿ ತ್ಯಾಜ್ಯವನ್ನು ನಿರ್ವಹಿಸುವ ಸಲುವಾಗಿ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ ಮತ್ತು ಸೂಕ್ತ ಸಂಗ್ರಹಣೆ-ಸAಸ್ಕರಣೆ ವ್ಯವಸ್ಥೆಯನ್ನು ಕಲ್ಪಿಸುವುದು ಗ್ರಾಮ ಪಂಚಾಯಿತಿಗಳ ಪ್ರಮುಖ ಜವಾಬ್ದಾರಿಯಾಗಿರುವ ಜೊತೆಗೆ ಸಮುದಾಯದ ಸಹಭಾಗಿತ್ವವೂ ಸಹ, ಗಣನೀಯ ಪಾತ್ರ ವಹಿಸುತ್ತದೆ ಎಂದು ಸ್ವಚ್ಛತೆ ಕುರಿತಂತೆ ಅರಿವು ಮೂಡಿಸಿದರು. ಇದರೊಂದಿಗೆ ಸಂಜೀವಿನಿ ಒಕ್ಕೂಟದೊಂದಿಗೆ ಕಸ ವಿಲೇವಾರಿ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕ್ಲಸ್ಟರ್ ಮೇಲ್ವಿಚಾರಕಿ ಶ್ವೇತಾ, ಎನ್.ಆರ್. ಎಲ್. ಎಮ್ ಯಂಗ್ ಪ್ರೋಫೆಶನ್‌ನ ಅರ್ಜುನ್, ಪಿ.ಡಿ.ಓ. ನಂದ ಕುಮಾರ್, ಎಮ್.ಬಿ.ಕೆ ದೇವಿಕಾ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಕಾರ್ಯದರ್ಶಿ ನಮಿತಾ, ಉಪಾಧ್ಯಕ್ಷೆ ವಾರಿಜಾ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.