ನಾಪೋಕ್ಲು, ನ. ೩೦: ನಾಪೋಕ್ಲು ಶಕ್ತಿ ಕೇಂದ್ರ, ಹೊದ್ದೂರು ಶಕ್ತಿ ಕೇಂದ್ರ ಮತ್ತು ಬಲ್ಲಮಾವಟಿ ಶಕ್ತಿ ಕೇಂದ್ರಗಳ ವತಿಯಿಂದ ನಾಪೋಕ್ಲು ಭಗವತಿ ಸಮುದಾಯ ಭವನದಲ್ಲಿ ಮುಂದಿನ ಚುನಾವಣೆ ಕುರಿತು ಪೂರ್ವ ಭಾವಿ ಸಭೆಯನ್ನು ಏರ್ಪಾಡಿಸಲಾಗಿತ್ತು, ಸಭೆಯಲ್ಲಿ ಮುಂದಿನ ಚುನಾವಣೆಯ ಪಕ್ಷದ ಅಭ್ಯರ್ಥಿ ಗೆಲುವಿನ ಬಗ್ಗೆ ರೂಪುರೇಷೆಗಳನ್ನು ಚರ್ಚಿಸಲಾಯಿತು.

ಈ ಸಂದರ್ಭ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಮಂಡೇಪAಡ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಮಂಡೆಪAಡ ಸುನಿಲ್ ಸುಬ್ರಮಣಿ, ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ರಾಬೀನ್ ದೇವಯ್ಯ, ರಾಜ್ಯ ಬಿ.ಜೆ.ಪಿ. ಸಮಿತಿಯ ಸದಸ್ಯರಾದ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಕಾಂಗೀರ ಸತೀಶ್, ಮೂರು ಶಕ್ತಿ ಕೇಂದ್ರದ ಅಧ್ಯಕ್ಷರುಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು, ಕಾರ್ಯಕರ್ತರು ಇದ್ದರು.