ಬೆಂಗಳೂರು, ನ. ೩೦: ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಅವರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.
ಕನ್ನಡ ರಾಜ್ಯೋತ್ಸವದಂದು ಕಾರ್ಯಕ್ರಮಕ್ಕೆ ಅನಿವಾರ್ಯ ಕಾರಣಗಳಿಂದ ರೋಹನ್ ಬೋಪಣ್ಣ ಗೈರುಹಾಜರಾಗಿದ್ದ ಹಿನ್ನೆಲೆ ಇಂದು ಸಿಎಂ ಸರ್ಕಾರಿ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ, ನಿರ್ದೇಶಕ ರಂಗಪ್ಪ, ನಿವೃತ್ತ ಐಎಎಸ್ ಅಧಿಕಾರಿ ಲಕ್ಷಿö್ಮÃನಾರಾಯಣ ಉಪಸ್ಥಿತರಿದ್ದರು.