ಮಡಿಕೇರಿ, ನ. ೩೦: ೨೦೨೧-೨೨ನೇ ಸಾಲಿಗೆ ಸಾಲ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸುವಿಧಾ ತಂತ್ರಾAಶದ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆ: ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣಕ್ಕಾಗಿ ಮಾತ್ರ) ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ೨೦೨೧-೨೨ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (೨, ೩, ೪ನೇ ಕಂತುಗಳು) ಅರ್ಜಿಗಳನ್ನು ಸುವಿಧಾ ಆನ್‌ಲೈನ್ ಪೋರ್ಟಲ್ (Suviಜhಚಿ ಔಟಿಟiಟಿe Poಡಿಣಚಿಟ) ಮುಖಾಂತರ hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ೨೦೨೨ರ ಜನವರಿ, ೧೦ರ ಸಂಜೆ ೫.೩೦ ರೊಳಗೆ ಅರ್ಜಿ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ದಾಖಲೆಗಳು (ಅರಿವು ನವೀಕರಣಕ್ಕೆ): ಜಾಮೀನುದಾರರ ಒಪ್ಪಿಗೆ ಪತ್ರ (ಅoಟಟಚಿಣeಡಿಚಿಟ ಂಛಿಛಿeಠಿಣಚಿಟಿಛಿe ಐeಣಣeಡಿ), ವ್ಯಾಸಂಗ ಪ್ರಮಾಣ ಪತ್ರ (Sಣuಜಥಿ ಅeಡಿಣiಜಿiಛಿಚಿಣe), ಹಣ ಸಂದಾಯ ರಶೀದಿ (ಈees ಖeಛಿeiಠಿಣ) ತಂದೆ ತಾಯಿ/ ಪೋಷಕರ ಒಪ್ಪಿಗೆ ಪತ್ರ (Pಚಿಡಿeಟಿಣs ಅoಟಿseಟಿಣ ಐeಣಣeಡಿ) ಅರ್ಜಿದಾರರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐಎಫ್‌ಎಸ್‌ಸಿ ಸಂಖ್ಯೆ ಮತ್ತು ಕೇಂದ್ರ ಆಧಾರ್ ಅಧಿನಿಯಮ, ೨೦೧೬ ಸೆಕ್ಷನ್ (೭)ರಡಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ.

ಹಸ್ತಚಾಲಿತವಾಗಿ (ಒಚಿಟಿuಚಿಟ/ಔಜಿಜಿಟiಟಿe) ಆಫ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆ: ಕಿರುಸಾಲ/ಸ್ವಸಹಾಯ ಗುಂಪುಗಳಿಗೆ ಸಾಲ ಮತ್ತು ಸಹಾಯಧನ ಯೋಜನೆ ಅರ್ಜಿಗಳನ್ನು ಹಸ್ತಚಾಲಿತ (ಔಜಿಜಿಟiಟಿe/ಒಚಿಟಿuಚಿಟ) ಮೂಲಕ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು ನಿಗದಿತ ಅರ್ಜಿ ನಮೂನೆಗಳಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ೨೦೨೨ರ ಜನವರಿ, ೧೦ರ ಸಂಜೆ ೫.೩೦ ಗಂಟೆಯೊಳಗೆ ಆಯಾಯ ಜಿಲ್ಲಾ ವ್ಯವಸ್ಥಾಪಕರ ಕಚೇರಿಗಳಲ್ಲಿ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಸಾಮಾನ್ಯ ಅರ್ಹತೆಗಳು: ಅರ್ಜಿದಾರರು ಪ್ರವರ್ಗ-೧ರ ೬(ಚಿ)ಯಿಂದ ೬(ಚಿಞ)ವರೆಗಿನ ಬೆಸ್ತ, ಅಂಬಿಗ/ಅAಬಿ, ಬರ‍್ಕಿ/ ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ಗುAಡೆಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಲಿಗ, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಖಾರ್ವಿ, ಕೋಳಿ, ಕೋಳಿಮಹದೇವ್, ಮಡ್ಡರ್, ಮೀನಗಾರ್, ಮೊಗವೀರ, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ, ಪಾಗಿ ಜಾತಿಗೆ ಸೇರಿದವರಾಗಿರಬೇಕು.

ಕೇಂದ್ರ ಆಧಾರ್ ಅಧಿನಿಯಮ, ೨೦೧೬ ಸೆಕ್ಷನ್ (೭)ರಡಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಆದಾಯ ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು. ಸರ್ಕಾರದ/ಯಾವುದಾದರೂ ನಿಗಮಗಳ ಯೋಜನೆಯಡಿಯಲ್ಲಿ ಕುಟುಂಬದ ಯಾರೇ ಆಗಲಿ ಈಗಾಗಲೇ ಯೋಜನಾ ಸೌಲಭ್ಯ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚಿನವರಿಗೆ ಸೌಲಭ್ಯ ಒದಗಿಸಲಾಗುವುದಿಲ್ಲ. ವಯೋಮಿತಿ ೧೮ ವರ್ಷಗಳಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಕಿರುಸಾಲ/ ಸ್ವಸಹಾಯ ಗುಂಪು ಯೋಜನೆಗೆ ವಾರ್ಷಿಕ ಆದಾಯ ಮಿತಿ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮,೦೦೦ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. ೧,೨೦,೦೦೦ ಗಳನ್ನು ಮೀರಿರಬಾರದು.

ಸರ್ಕಾರದಿಂದ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಸಾಲ ಸೌಲಭ್ಯ ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗೆ ಸಂಬAಧಪಟ್ಟ ಜಿಲ್ಲೆಗಳಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ/ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ ಅಥವಾ ನಿಗಮದ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಮತ್ತು ವಿವರ ಪಡೆಯಬಹುದಾಗಿದೆ. ನಿಗಮದ ಕೇಂದ್ರ ಕಚೇರಿ ಸಹಾಯವಾಣಿ ದೂರವಾಣಿ ಸಂಖ್ಯೆ ೦೮೦-೨೨೮೬೪೦೯೯ಗೆ ಪೂರ್ವಾಹ್ನ ೧೦ ಗಂಟೆಯಿAದ ಸಂಜೆ ೫.೩೦ ರವರೆಗೆ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ೨೦೨೨ ರ ಜನವರಿ ೧೦ ರ ಸಂಜೆ ೫.೩೦ ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಸಲ್ಲಿಸುವಂತೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

ನವೋದಯ ಪ್ರವೇಶಕ್ಕೆ

ಕೇಂದ್ರ ಸರಕಾರದ ಮಾನವಸಂಪನ್ಮೂಲ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ತಾ. ೧೫.೧೨.೨೦೨೧ ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಸಲು ಈ ವಿಳಾಸವನ್ನು ನೋಡಬಹುದು ತಿತಿತಿ.ಟಿಚಿvoಜಚಿಥಿಚಿ.gov.iಟಿ, ೩೦.೦೪.೨೦೨೨ ರಂದು ಪರೀಕ್ಷೆ ನಡೆಯಲಿದೆ ಎಂದು ಗಾಳಿಬೀಡು ನವೋದಯ ವಿದ್ಯಾಲಯದ ಪ್ರಾಂಶುಪಾಲ ಪಂಕಜಾಕ್ಷನ್ ಓ.ಎಂ. ಅವರು ತಿಳಿಸಿದ್ದಾರೆ.

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದಿಂದ ಸವಿತಾ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ೨೦೨೧-೨೨ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.

ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ: ಈ ಯೋಜನೆಯಡಿ ಕುಲಕಸುಬು, ಸಾಂಪ್ರದಾಯಿಕ ವೃತ್ತಿಗಳಾದ ಕ್ಷೌರಿಕ ವೃತ್ತಿ, ಬ್ಯೂಟಿಷಿಯನ್, ಡೋಲು, ವಾದ್ಯ ಮತ್ತು ಬ್ಯಾಂಡ್‌ಸೆಟ್ ಮುಂತಾದ ವೃತ್ತಿಗಳನ್ನು ಹಾಗೂ ಕೌಶಲ್ಯತೆ ಹೊಂದಿರುವ ವೃತ್ತಿಗಳನ್ನು ಕೈಗೊಳ್ಳಲು ಗರಿಷ್ಠ ರೂ.೨ ಲಕ್ಷಗಳವರೆಗೆ ಆರ್ಥಿಕ ನೆರವು, ಇದರಲ್ಲಿ ಗರಿಷ್ಠ ಶೇ.೧೫ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.೨ರ ಬಡ್ಡಿ ದರದಲ್ಲಿ ಸಾಲ.

ಸ್ವಯಂ ಉದ್ಯೋಗ ಸಾಲ ಯೋಜನೆ: ಈ ಯೋಜನೆಯಡಿ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾವಲಯ, ಮುಂತಾದ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.೨ ಲಕ್ಷಗಳವರೆಗೆ ಆರ್ಥಿಕ ನೆರವು, ಇದರಲ್ಲಿ ಗರಿಷ್ಠ ಶೇ.೧೫ ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.೪ರ ಬಡ್ಡಿದರಲ್ಲಿ ಸಾಲ.

ಸೌಲಭ್ಯ ಪಡೆಯ ಬಯಸುವವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮ ಸಾವಿರ ಮತ್ತು ಪಟ್ಟಣ ಪ್ರದೇಶದವರಿಗೆ ರೂ. ೧,೨೦,೦೦೦ಗಳ ಒಳಗಿರಬೇಕು ಮತ್ತು ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಈ ಎಲ್ಲಾ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಸಮಾಜದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‌ಸೈಟ್ hಣಣಠಿs://ಞssಜ.ಞಚಿಡಿಟಿಚಿಣಚಿಞಚಿ.gov.iಟಿನಲ್ಲಿ ಪಡೆದು, ಅರ್ಜಿಯೊಂದಿಗೆ ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್‌ಕಾರ್ಡ್ ಜೊಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತಾ ಪುಸ್ತಕದ ಪ್ರತಿ, ಫೋಟೋ ಮತ್ತು ಇತರೆ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಅರ್ಜಿಯನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ೨೦೨೨ ರ ಜನವರಿ ೧೦ ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨ ಹಾಗೂ ೦೮೦-೨೯೫೦೬೧೭೪-೫ ಸಂಪರ್ಕಿಸಲು ಅಥವಾ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಮೂಲಕ ಸಂಪರ್ಕಿಸಬಹುದು.

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೧-೨೨ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸುವಿಧಾ ತಂತ್ರಾAಶದ ಮುಖಾಂತರ (ಆನ್‌ಲೈನ್) ಅರ್ಜಿ ಸ್ವೀಕೃರಿಸಲಾಗುವುದು.

ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿಶ್ವಕರ್ಮ ಸಮುದಾಯದ ಹಾಗೂ ಅದರ ಉಪಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ೨೦೨೧-೨೨ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (೨,೩,೪,೫ನೇ ಕಂತುಗಳು) ಸುವಿಧಾ ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಆಧಾರ್ ಜೋಡಣೆಯೊಂದಿಗೆ ಪ್ರಸ್ತುತÀ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹಾಗೂ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಈ ಅರ್ಜಿಗಳನ್ನು hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಈ ಯೋಜನೆಗೆ ಸಂಬAಧಿಸಿದAತೆ, ಸಲ್ಲಿಸಬೇಕಾಗಿರುವ ದಾಖಲೆಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ hಣಣಠಿs://ಞvಛಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಪಡೆಯಬಹುದು. ಹಸ್ತಚಾಲಿತವಾಗಿ (ಆಪ್‌ಲೈನ್) ಅರ್ಜಿ ಸ್ವೀಕೃತಿ. ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು ಯೋಜನೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ. ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ. ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ. ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ.

ಈ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಬಯಸುವ ಅರ್ಜಿದಾರರು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ವೆಬ್‌ಸೈಟ್‌ನ್ನು ಸಂಪರ್ಕಿಸಿ ಅರ್ಜಿ ನಮೂನೆಗಳನ್ನು ಪಡೆದು ಅಗತ್ಯ ದಾಖಲಾತಿಗಳನ್ನು ಭರ್ತಿ ಮಾಡಿ ಜಿಲ್ಲಾ ಕಚೇರಿಗಳಿಗೆ ನೇರವಾಗಿ ಸಲ್ಲಿಸಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-೨ಎ ಬರುವ ವಿಶ್ವಕರ್ಮ ಜಾತಿ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೪೦ ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.೫೫ ಸಾವಿರಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು, ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ನೀಡುವುದು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ನಿಗಮದ ವೆಬ್‌ಸೈಟ್ ತಿತಿತಿ.ಞvಛಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ:೦೮೦-೨೨೩೭೪೮೪೮ ಅಥವಾ ಆಯಾಯ ಜಿಲ್ಲಾ ಕಚೇರಿಗಳ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ೨೦೨೨ ರ ಜನವರಿ ೧೦ ರೊಳಗೆ ಸಲ್ಲಿಸಬೇಕು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.