ಮಡಿಕೇರಿ, ನ. ೩೦: ಮೈಸೂರು, ಧಾರವಾಡ ಮತ್ತು ಬೆಂಗಳೂರು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಲ್ಲಿ ಇತ್ತೀಚೆಗೆ ಕೋವಿಡ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಕೆಲವೊಂದು ಸಲಹೆಗಳನ್ನು ನೀಡಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಆದೇಶ ಹೊರಡಿಸಿದ್ದು, ವಿವರ ಇಂತಿದೆ.
ವೈದ್ಯಕೀಯ, ಅರೆವೈದ್ಯಕೀಯ ಮತ್ತು ಅಂತಹ ಇತರ ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳನ್ನು ಪ್ರತಿ ದಿನ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್ ಲಕ್ಷಣ ಕಂಡುಬAದಲ್ಲಿ ಈಗಾಗಲೇ ನೀಡಿರುವ ಮಾರ್ಗಸೂಚಿಗಳ ಪ್ರಕಾರ ಚಿಕಿತ್ಸೆ ನೀಡಬೇಕು.
ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎರಡು ತಿಂಗಳುಗಳ ಕಾಲ ಮುಂದೂಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸಮ್ಮೇಳನಗಳು, ಸೆಮಿನಾರ್ಗಳು, ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿಗಳನ್ನು ಸಾಧ್ಯವಿರುವಲ್ಲೆಲ್ಲಾ ಮುಂದೂಡಬೇಕು. ಪರ್ಯಾಯವಾಗಿ ಕನಿಷ್ಟ ಭೌತಿಕ ಹಾಜರಾತಿಯೊಂದಿಗೆ ಸಂವಹನ ಮಾಧ್ಯಮದ ಮೂಲಕ ಹೆಚ್ಚು ಹಾಜರಾಗಲು ಕ್ರಮವಹಿಸಬೇಕು.
ಶೈಕ್ಷಣಿಕ ಸಂಸ್ಥೆಗಳ ಕ್ಯಾಂಪಸ್ನೊಳಗೆ ವಿಶೇಷವಾಗಿ ಕಾರ್ಯಕ್ರಮಗಳನ್ನು ನಡೆಸುವಾಗ ಕೋವಿಡ್ ನಿಯಮ ಪಾಲನೆಯಾಗುವ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಸಾರ್ವಜನಿಕ ಆರೋಗ್ಯದ ಹಿತಾಸಕ್ತಿಯಿಂದ ಇತರ ಕ್ಷೇತ್ರಗಳಲ್ಲಿನ ವೃತ್ತಿಪರರಿಗೆ ಸಕಾರಾತ್ಮಕ ಸಂದೇಶಗಳನ್ನು ಕಳುಹಿಸಲು ಆರೋಗ್ಯ ವೃತ್ತಿಪರರು, ಸಮ್ಮೇಳನಗಳು, ಸೆಮಿನಾರ್ಗಳು, ಸಿಎಂಇ ಸೆಷನ್ ಇತ್ಯಾದಿಗಳನ್ನು ಕೆಲವು ತಿಂಗಳುಗಳ ಕಾಲ ನಡೆಸಬೇಕು.
ಶಿಕ್ಷಣ ಸಂಶ್ಥೆಗಳ ಎಲ್ಲಾ ಮುಖ್ಯಸ್ಥರು ತಮ್ಮ ವಿದ್ಯಾರ್ಥಿಗಳು (೧೮ ವರ್ಷಕ್ಕಿಂತ ಮೇಲ್ಪಟ್ಟವರು) ಮತ್ತು ಸಿಬ್ಬಂದಿಗಳು ಲಸಿಕೆ ಹಾಕಿಸಿಕೊಂಡ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಹಾಗೂ ಇದುವರೆಗೂ ಲಸಿಕೆ ಹಾಕಿಸಿಕೊಳ್ಳದ ವಿದ್ಯಾರ್ಥಿ, ಸಿಬ್ಬಂದಿಗಳ ವಿವರಗಳನ್ನು ಅತಿ ತುರ್ತಾಗಿ ಸಂಬAಧಪಟ್ಟ ತಾಲೂಕು ವೈದ್ಯಾಧಿಕಾರಿಗಳಿಗೆ ನೀಡಿ ಪ್ರತಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಕಳುಹಿಸಬೇಕೆಂದು ಆದೇಶಿಸಿದ್ದಾರೆ.