ಕೂಡಿಗೆ, ನ. ೩೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿರುವ ಆನೆ ಕೆರೆಯ ದಂಡೆ ಮತ್ತು ಅದರ ಸುತ್ತಲೂ ಬೆಳೆದು ನಿಂತಿದ್ದ ಗಿಡ ಗಂಟಿಗಳನ್ನು ಕಡಿದು ದುರಸ್ತಿ ಮಾಡುವ ಕಾರ್ಯ ಆರಂಭಗೊAಡಿದೆ. ಈ ಸಾಲಿನಲ್ಲಿ ಆನೆ ಕೆರೆಯು ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ ನಾಲ್ಕು ಗ್ರಾಮಗಳ ದನಕರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಅನುಕೂಲ, ಮತ್ತು ಈ ಭಾಗದಲ್ಲಿ ಅಂತರ್ಜಲದ ಮಟ್ಟವೂ ಹೆಚ್ಚಾಗಿ ಕೊಳವೆ ಬಾವಿಗಳಿಂದ ಉತ್ತಮವಾದ ನೀರು ಬರುತ್ತಿವೆ. ಇದರಿಂದಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ನವರ ಮಾರ್ಗದರ್ಶನದಲ್ಲಿ ಸದಸ್ಯರಾದ ದಿನೇಶ್, ಗಿರೀಶ್ನವರ ಸ್ವಂತ ಹಣದಲ್ಲಿ ಜೆಸಿಬಿ ಯಂತ್ರಗಳ ಮೂಲಕ ದುರಸ್ತಿ ಕಾರ್ಯ ಮಾಡಲಾಗುತ್ತಿದೆ.