ಗೋಣಿಕೊಪ್ಪಲು, ನ. ೩೦: ಮೂಲತಃ ಹುಣಸೂರು ಮೂಲದ ಗೋಣಿಕೊಪ್ಪಲುವಿನಲ್ಲಿ ಗುಜರಿ ವ್ಯಾಪಾರ ನಡೆಸುತ್ತಿದ್ದ ರಸೂಲ್ ಶರೀಫ್ (೪೫) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಗರದ ಆಸ್ಪತ್ರೆ ಹಿಂಭಾಗದಲ್ಲಿ ಕಳೆದ ಹಲವಾರು ವರ್ಷಗಳಿಂದ ಗುಜರಿ ವ್ಯಾಪಾರ ನಡೆಸುತ್ತಿದ್ದ ರಸೂಲ್ ಹುಣಸೂರಿನ ಸಮೀಪವಿರುವ ತನ್ನ ಮನೆಗೆ ರಾತ್ರಿಯ ವೇಳೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಚಿಲುಕುಂದ ಬಳಿ ಬೈಕ್ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಆಗಿದೆ. ಈ ವೇಳೆ ಮೃತ ವ್ಯಕ್ತಿಯ ತಲೆಭಾಗಕ್ಕೆ ತೀವ್ರ ಪೆಟ್ಟಾದ ಕಾರಣ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.