ಪೊನ್ನಂಪೇಟೆ, ಡಿ. ೧: ಗೋಣಿಕೊಪ್ಪಲಿನ ನಗರ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ನಿAದ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಅಭ್ಯರ್ಥಿ ಮಂಥರ್‌ಗೌಡ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎ.ಎಸ್. ಅರುಣ್ ಮಾಚಯ್ಯ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ಎ.ಎಸ್. ಟಾಟು ಮೊಣ್ಣಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮೀದೇರಿರ ನವೀನ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ. ಉಸ್ಮಾನ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷೆ ಪಿ.ಆರ್. ಪಂಕಜ, ಪಕ್ಷದ ಪ್ರಮುಖರಾದ ಎ.ಎಸ್. ನರೇನ್ ಕಾರ್ಯಪ್ಪ, ಆಲೀರ ಎಂ. ರಶೀದ್, ಕೆ.ಎಂ. ಅಜಿತ್ ಅಯ್ಯಪ್ಪ, ಅಂಕಿತ್ ಪೊನ್ನಪ್ಪ, ಬಿ.ಎನ್. ಪ್ರತ್ಯು, ಮುಕ್ಕಾಟಿರ ಸಂದೀಪ್, ಆಲೀರ ಮುತ್ತು ರಶೀದ್, ಕೆ.ಎಂ. ಬಾಲಕೃಷ್ಣ, ಎ.ಎಂ. ಸಾದಲಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು. ಗೋಣಿಕೊಪ್ಪಲು ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಸ್ವಾಗತಿಸಿ, ವಂದಿಸಿದರು.