ಓಮಿಕ್ರಾನ್ ಭೀತಿ: ಅಂರ‍್ರಾಷ್ಟಿçÃಯ ವಿಮಾನ ಸೇವೆ ತಾ. ೧೫ ರಿಂದ ಪುನರಾರಂಭ ಇಲ್ಲ
ನವದೆಹಲಿ, ಡಿ. ೧: ಹೊಸ ಕೋವಿಡ್ ರೂಪಾಂತರಿ ಓಮಿಕ್ರಾನ್ ತಳಿ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ತಾ. ೧೫ ರಿಂದ ನಿಗದಿತ ಅಂರ‍್ರಾಷ್ಟಿçÃಯ ವಿಮಾನಗಳ ಪುನರಾರಂಭವನ್ನು ಮುಂದೂಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ಧರಿಸಿದೆ. ಹೊಸ ರೂಪಾಂತರಿಯ ಹೊರಹೊಮ್ಮುವಿಕೆಯೊಂದಿಗೆ ವಿಕಸನಗೊಳ್ಳುತ್ತಿರುವ ಜಾಗತಿಕ ಸನ್ನಿವೇಶದ ದೃಷ್ಟಿಯಿಂದ, ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ನಿಗದಿತ ವಾಣಿಜ್ಯ ಅಂರ‍್ರಾಷ್ಟಿçÃಯ ಪ್ರಯಾಣಿಕರ ಸೇವೆಗಳ ಪುನರಾರಂಭದ ದಿನಾಂಕವನ್ನು ಮುಂದೂಡಲಾಗಿದೆ ಎಂದು ಡಿಜಿಸಿಎ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ತಿಂಗಳು, ಅಂರ‍್ರಾಷ್ಟಿçÃಯ ವಿಮಾನ ಕಾರ್ಯಾಚರಣೆಗಳನ್ನು ಸಾಮಾನ್ಯಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ನಂತರ ಮಾರ್ಚ್ ೨೦೨೦ ರಿಂದ ಭಾರತಕ್ಕೆ ಮತ್ತು ಭಾರತದಿಂದ ನಿಗದಿತ ಅಂರ‍್ರಾಷ್ಟಿçÃಯ ವಿಮಾನಗಳನ್ನು ಸ್ಥಗಿತಗೊಳಿಸಿತ್ತು. ಬೋಟ್ವಾನಾ, ಯುಕೆ, ಆಸ್ಟೆçÃಲಿಯಾ, ಆಸ್ಟಿçಯಾ, ಬೆಲ್ಜಿಯಂ, ಬ್ರೆಜಿಲ್, ಕೆನಡಾ, ಜೆಕ್ ರಿಪಬ್ಲಿಕ್, ಡೆನ್ಮಾರ್ಕ್, ಜರ್ಮನಿ, ಹಾಂಗ್ ಕಾಂಗ್, ಇಸ್ರೇಲ್, ಇಟಲಿ, ಜಪಾನ್, ನೆದರ್ಲ್ಯಾಂಡ್ಸ್, ಪೋರ್ಚುಗಲ್, ದಕ್ಷಿಣ ಆಫ್ರಿಕಾ, ಸ್ಪೇನ್, ಸ್ವೀಡನ್, ಸ್ವಿಟ್ಜರ್ಲೆಂಡ್, ನೈಜೀರಿಯಾ ಮತ್ತು ಸೌದಿ ಅರೇಬಿಯಾದಲ್ಲಿ ಇಲ್ಲಿಯವರೆಗೆ ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
ವಿದೇಶಿ ಪ್ರಯಾಣಿಕರಿಗಾಗಿ ಪ್ರತ್ಯೇಕ ವಾರ್ಡ್ಗಳ ಸ್ಥಾಪನೆ: ಸಚಿವ ಸುಧಾಕರ್
ಬೆಂಗಳೂರು, ಡಿ. ೧: ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ವಿದೇಶಿ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ಗಳನ್ನು ರಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ. ಒಮಿಕ್ರಾನ್ ವೈರಸ್ ಸೋಂಕಿತರು ಕಂಡುಬAದರೆ ಅವರಿಗೆ ಆಸ್ಪತ್ರೆಗಳಲ್ಲಿ ವಿಶೇಷ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುವುದು. ಇದಕ್ಕಾಗಿ ಸರ್ಕಾರಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳ ಜೊತೆ ಮಾತುಕತೆ ನಡೆಸಲಾಗಿದೆ. ಆರೋಗ್ಯ ಇಲಾಖೆ ಈಗಾಗಲೇ ಜಿಲ್ಲಾ ಆರೋಗ್ಯಾ ಧಿಕಾರಿಗಳ ಜೊತೆ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚಿಸಿದೆ ಎಂದರು. ಹೊರ ದೇಶಗಳಿಂದ ಬರುವ ಎಲ್ಲಾ ಪ್ರಯಾ ಣಿಕರಿಗೆ ವಿಮಾನ ನಿಲ್ದಾಣದಲ್ಲಿಯೇ ಇಂದಿನಿAದ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಆರಂಭವಾಗಲಿದೆ. ವಿದೇಶದಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಡುವ ಆರ್‌ಟಿಪಿಸಿಆರ್ ಪರೀಕ್ಷೆ ವರದಿ ನೆಗೆಟಿವ್ ಬಂದರೆ ಅವರನ್ನು ಮನೆಗೆ ಕಳುಹಿಸಿ ಅಲ್ಲಿ ಅವರನ್ನು ೭ ದಿನಗಳ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು. ಕ್ವಾರಂಟೈನ್‌ನಲ್ಲೇ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ರೋಗ ಲಕ್ಷಣ ಇರು ವವರಿಗೆ, ಆರ್‌ಟಿಪಿಸಿಆರ್ ವರದಿ ನೆಗೆಟಿವ್ ಬಂದರೆ, ೫ನೇ ದಿನ ಅವರನ್ನು ಮತ್ತೆ ಪರೀಕ್ಷೆ ಮಾಡಲಾಗುವುದು. ಅದರಲ್ಲೂ ನೆಗೆಟಿವ್ ವರದಿ ಬಂದರೆ ೭ ದಿನಗಳ ಬಳಿಕ ಅವರು ಕ್ವಾರಂಟೈನ್‌ನಿAದ ಹೊರ ಬರಬಹುದು. ಒಂದು ವೇಳೆ ಆರ್‌ಟಿಪಿಸಿಆರ್ ವರದಿಯಲ್ಲಿ ಪಾಸಿಟಿವ್ ಬಂದರೆ ಅವರನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತದೆ. ಪರೀಕ್ಷೆ ಕಡ್ಡಾಯವಾಗಿರುವುದರಿಂದ ಪ್ರಯಾಣಿಕರಿಗೆ ಸ್ವಲ್ಪ ತಡವಾಗಬಹುದು. ಆದರೆ ಇದು ಅನಿವಾರ್ಯ ಎಂದು ಸುಧಾಕರ್ ತಿಳಿಸಿದರು.
ತಾನೇ ತೋಡಿದ ಹಳ್ಳಕ್ಕೆ ಬಿದ್ದ ರೌಡಿ ಕುಳ್ಳ ದೇವರಾಜ್
ಬೆಂಗಳೂರು, ಡಿ. ೧: ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಕೊಲೆ ಮಾಡುವ ಬಗ್ಗೆ ಮಾತನಾಡಿರುವ ವೀಡಿಯೋ ರೆಕಾರ್ಡ್ ಮಾಡಿದ ರೌಡಿ ಕುಳ್ಳ ದೇವರಾಜ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಯಲಹಂಕ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಕೊಲೆ ಮಾಡುವ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ, ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಎಸ್.ಆರ್. ವಿಶ್ವನಾಥ್ ಆಪ್ತನೇ ಎದುರಾಳಿ ಅಭ್ಯರ್ಥಿಯ ರಹಸ್ಯ ಕಾರ್ಯಾಚರಣೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಎಸ್.ಆರ್. ವಿಶ್ವನಾಥ್ ಬಿಡಿಎ ಅಧ್ಯಕ್ಷ. ಯಲಹಂಕ ಕ್ಷೇತ್ರದ ಶಾಸಕ. ಇವರ ವಿರುದ್ಧ ಸ್ಪರ್ಧಿಸಿದ್ದ ಗೋಪಾಲಕೃಷ್ಣ ಎರಡು ಬಾರಿ ಸೋತಿದ್ದರು. ಇತ್ತೀಚೆಗೆ ಗೋಪಾಲಕೃಷ್ಣ ಅವರನ್ನು ಸಂಪರ್ಕಿಸಿದ್ದ ಕುಳ್ಳ ದೇವರಾಜ್, ಎಸ್.ಆರ್. ವಿಶ್ವನಾಥ್ ಹತ್ಯೆ ಸ್ಕೆಚ್ ಬಗ್ಗೆ ಕೆಣಕಿದ್ದಾನೆ. ಎದುರಾಳಿ ಅಭ್ಯರ್ಥಿ ವಿಶ್ವನಾಥ್ ಹತ್ಯೆ ಬಗ್ಗೆ ಆಡಿರುವ ಮಾತುಗಳನ್ನು ಕುಳ್ಳ ದೇವರಾಜ್ ವೀಡಿಯೋ ಮಾಡಿಕೊಂಡಿದ್ದಾನೆ. ಈ ವೀಡಿಯೋ ಸಿಸಿಬಿ ಕೈ ಸೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ಗೋಪಾಲಕೃಷ್ಣ ಹಾಗೂ ವೀಡಿಯೋ ಮಾಡಿದ್ದ ಕುಳ್ಳ ದೇವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗೋಪಾಲಕೃಷ್ಣನನ್ನು ಮಂಗಳವಾರ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದು, ಆತ ನೀಡಿದ ಮಾಹಿತಿ ಮೇರೆಗೆ ಕುಳ್ಳ ದೇವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ರೂ. ೧೦೦ ಏರಿಕೆ
ನವದೆಹಲಿ, ಡಿ. ೧: ಲಾಕ್‌ಡೌನ್ ಬಳಿಕ ದಿನೇ ದಿನೇ ದೇಶದಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಪೆಟ್ರೋಲಿಯಂ ಕಂಪೆನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ದರ ಹೆಚ್ಚಿಸಿವೆ. ಇದೀಗ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ರೂ. ೧೦೦ ಏರಿಸಲಾಗಿದೆ. ರೂ. ೧೦೦ ಏರಿಕೆಯೊಂದಿಗೆ ಸದ್ಯಕ್ಕೆ ರಾಷ್ಟç ರಾಜಧಾನಿ ದೆಹಲಿಯಲ್ಲಿ ೧೯ ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ೨,೧೦೧ ರೂ.ಗೆ ಲಭ್ಯವಾಗುತ್ತಿದೆ. ಈ ಹಿಂದೆ, ನವೆಂಬರ್ ೧ ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ದರವನ್ನು ೨೬೬ ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಗೃಹ ಬಳಕೆ ಎಲ್‌ಪಿಜಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ತೈಲ, ತರಕಾರಿ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರು ಈಗಾಗಲೇ ಕಂಗಾ ಲಾಗಿದ್ದಾರೆ. ಈ ನಡುವೆಯೇ ಇಂದಿನಿAದ ವಾಣಿಜ್ಯ ಸಿಲಿಂಡರ್ ಬೆಲೆ ಯನ್ನು ಹೆಚ್ಚಿಸಲಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳವಾದ ಹಿನ್ನೆಲೆ ಹೊಟೇಲ್, ರೆಸ್ಟೋರೆಂಟ್‌ನಲ್ಲಿ ಆಹಾರ ಮತ್ತು ಪಾನೀಯಗಳ ಬೆಲೆ ಕೂಡ ದುಬಾರಿಯಾಗಲಿದೆ. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ೧೦೦ ರೂಪಾಯಿ ಏರಿಕೆಯಾಗಿದೆ. ಈ ಬೆಲೆ ಏರಿಕೆ ಬಳಿಕ ದೇಶದ ರಾಜಧಾನಿ ಯಲ್ಲಿ ೧೯ ಕೆ.ಜಿ. ಸಿಲಿಂಡರ್ ಬೆಲೆ ೨೧೦೧ ರೂಪಾಯಿಗೆ ಏರಿದೆ.