ಮಡಿಕೇರಿ, ಡಿ. ೧ : ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ತಾ. ೪, ೫ ಮತ್ತು ೧೯ ರಂದು ನಡೆಯುವ ಗ್ರೂಪ್ ‘ಸಿ’ ತಾಂತ್ರಿಕೇತರ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಂತ ಜೋಸೆಫರ ಕಾನ್ವೆಂಟ್ ಪರೀಕ್ಷಾ ಕೇಂದ್ರ ಸೇರಿದಂತೆ ಈ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ಪರೀಕ್ಷಾ ದಿನಗಳಂದು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ.

ಪರೀಕ್ಷಾ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು, ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟಾçನಿಕ್ ಸಾಮಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯ ನಡೆಸಬಾರದು. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬAಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಪರೀಕ್ಷೆ ಸಂಬAಧ ಸರ್ಕಾರ ಹೊರಡಿಸಿರುವ ಕೋವಿಡ್-೧೯ ಸಮುಚಿತ ಮಾರ್ಗಸೂಚಿಯನ್ನು ಪಾಲಿಸುವುದು. ಈ ಆದೇಶವು ಪರೀಕ್ಷೆ ಆರಂಭದ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಕ್ತಾಯದ ಒಂದು ಗಂಟೆ ನಂತರದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.