ಮಡಿಕೇರಿ, ಡಿ. ೧: ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಮಹಾಸಭೆಯನ್ನು ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ತಿಳಿಸಿದ್ದಾರೆ.
ಈ ಹಿಂದೆ ಡಿ. ೬ ರಂದು ಕುಶಾಲನಗರದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತಾದರೂ ವಿಧಾನ ಪರಿಷತ್ ಚುನಾವಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗ್ರಾ.ಪಂ. ಹಾಗೂ ಸಹಕಾರ ಸಂಘಗಳ ಚುನಾಯಿತ ಪ್ರತಿನಿಧಿಗಳನ್ನು ಸನ್ಮಾನಿಸುವ ಕಾರ್ಯಕ್ರಮಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದ್ದರಿಂದ ಸಭೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.