ಮಡಿಕೇರಿ, ಡಿ. ೧ : ಹಲ್ಲೆ ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಶನಿವಾರಸಂತೆ ಪೊಲೀಸ್ ಠಾಣೆ ಎದುರು ಮಹಿಳೆಯರು ನಡೆಸಿದ್ದ ಪ್ರತಿಭಟನೆಯ ಘೋಷಣೆಗಳಿರುವ ವೀಡಿಯೋವನ್ನು ತಿರುಚಲಾಗಿದೆ ಎಂಬ ಆರೋಪಕ್ಕೆ ಸಂಬAಧಿಸಿದAತೆ ಸೂಕ್ತ ತನಿಖೆ ಮಾಡುವಂತೆ ಶನಿವಾರಸಂತೆಯ ಪ್ರಮುಖರು ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾ.ಪಂ. ಸದಸ್ಯ ಎಸ್.ಎನ್. ರಘು ಪ್ರತಿಭಟನೆಯಲ್ಲಿ ಮಹಿಳೆಯರು ಅಂಬೇಡ್ಕರ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದನ್ನು ತಿರುಚಲಾಗಿದೆ ಎಂದು ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಯಾವುದೇ ವಿಚಾರಣೆ ನಡೆಸದೆ ಏಕಾಏಕಿ ಪ್ರಕರಣ ದಾಖಲಿಸಲಾಗಿದೆ. ಇದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಆಗ್ರಹಿಸಿದರು. ಶನಿವಾರಸಂತೆಯಲ್ಲಿ ಹಿಂದೂ -ಮುಸ್ಲಿಮರು ಅನ್ಯೋನ್ಯತೆಯಿಂದ ಇದ್ದಾರೆ. ಆದರೆ ಯುವಕರ ಮೇಲೆ ಹಲ್ಲೆ ಮಾಡಿದ ಗುಂಪಿನವರಿAದ ಅಶಾಂತಿ ಸೃಷ್ಟಿಯಾಗಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.
ಅಲ್ಲದೆ ಸುಳ್ಳು ಮೊಕದ್ದಮೆ ಹೂಡಿರುವ ಶನಿವಾರಸಂತೆ ಪೊಲೀಸ್ ಅಧಿಕಾರಿಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದರು. ಗೋಷ್ಠಿಯಲ್ಲಿ ಪ್ರಮುಖರಾದ ಶಾಂತವೇರಿ ವಸಂತ್, ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್ ಕುಮಾರ್, ಹಿಂ.ಜಾ.ವೇ. ತಾಲೂಕು ಉಪಾಧ್ಯಕ್ಷ ಕೆ.ಎ. ಸಂದೀಪ್ ಇದ್ದರು.