ಒಡಿಷ, ಡಿ. ೧: ಒಡಿಷದಲ್ಲಿ ನಡೆಯುತ್ತಿರುವ ಜೂನಿಯರ್ ಹಾಕಿ ವಿಶ್ವ ಕಪ್‌ನ ಸೆಮಿಫೈನಲ್ ಹಂತಕ್ಕೆ ಭಾರತ ತಂಡ ಲಗ್ಗೆ ಇಟ್ಟಿದೆ. ಇಂದು ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಬೆಲ್ಜಿಯಂ ತಂಡವನ್ನು ೧-೦ ಗೋಲುಗಳಿಂದ ಸೋಲಿಸುವ ಮೂಲಕ ಜರ್ಮನಿ ವಿರುದ್ಧದ ಸೆಮಿಫೈನಲ್ ಪಂದ್ಯಾಟಕ್ಕೆ ಅರ್ಹತೆ ಪಡೆದಿದೆ. ಶುಕ್ರವಾರ ಸೆಮಿಫೈನಲ್ ಜರುಗಲಿದೆ. ಭಾರತ ತಂಡದ ಕೋಚ್ ಆಗಿ ವೀರಾಜಪೇಟೆಯ ಬೊಳ್ಳೆಪಂಡ ಜೆ. ಕಾರ್ಯಪ್ಪ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.