ಮಡಿಕೇರಿ, ಡಿ. ೧: ಪ್ರತಿಯೊಬ್ಬರು ಲಸಿಕೆ ಪಡೆಯುವ ಮೂಲಕ ಕೋವಿಡ್ ವಿರುದ್ಧ ಸರಕಾರ ನಡೆಸುತ್ತಿರುವ ಅಭಿಯಾನಕ್ಕೆ ಸಹಕಾರ ನೀಡಬೇಕೆಂದು ಕೊಡಗು ಜಿಲ್ಲಾ ನಾಯಿಬ್ ಖಾಝಿಗಳಾದ ಶಾದುಲಿ ಫೈಝಿ ಉಸ್ತಾದ್ ಮನವಿ ಮಾಡಿದ್ದಾರೆ.

ಕೊಡಗು ಜಿಲ್ಲಾ ಮದನೀಸ್ ಅಸೋಸಿಯೇಷನ್ ವತಿಯಿಂದ ಮೇಕೇರಿಯಲ್ಲಿ ನಡೆದ ತಾಜುಲ್ ಉಲಮಾ ಹಾಗೂ ಮಹ್ಮೂದ್ ಉಸ್ತಾದ್ ಅವರ ಸಂಸ್ಮರಣಾ ಸಭೆಯ ಉದ್ಘಾಟನಾ ಭಾಷಣದಲ್ಲಿ ಮಾತ ನಾಡಿದ ಅವರು ಲಸಿಕೆ ಪಡೆಯಲು ಯಾರೂ ಹಿಂಜರಿಯಬಾರದೆAದು ಹೇಳಿದರು.

ಕೂರ್ಗ್ ಜಂಇಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಸಂಸ್ಮರಣಾ ಭಾಷಣ ಮಾಡಿ ಮಹಾತ್ಮರ ತ್ಯಾಗೋಜ್ವಲ ವಾಗಿರುವ ಬದುಕನ್ನು ನಾವು ಮಾದರಿ ಯಾಗಿ ಸ್ವೀಕರಿಸಬೇಕೆಂದು ಕರೆ ನೀಡಿದರು.

ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದ್ ಶಿಹಾಬುದ್ದೀನ್ ಅಲ್ ಐದರೂಸಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಜಿಲ್ಲಾ ಮದನೀಸ್ ಅಸೋಸಿಯೇಷನ್ ಅಧ್ಯಕ್ಷ ಹಮೀದ್ ಮದನಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಎಸ್‌ವೈಎಸ್ ಕೊಡಗು ಜಿಲ್ಲಾಧ್ಯಕ್ಷÀ ಸಯ್ಯಿದ್ ಇಲ್ಯಾಸ್ ಅಲ್ ಐದರೂಸಿ, ಕರ್ನಾಟಕ ಮುಸ್ಲಿಂ ಜಮಾಅತ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಕುಂಜಿಲ ಮತ್ತಿತರ ಪ್ರಮುಖರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು. ಪ್ರಮುಖರಾದ ಅಬ್ದುಲ್ಲ ಮದನಿ ಸ್ವಾಗತಿಸಿ, ಹನೀಫ್ ಮದನಿ ವಂದಿಸಿದರು.