ಮಡಿಕೇರಿ, ಡಿ. ೧ : ಕರ್ನಾಟಕ ಉಪ್ಪಾರ ಅಭಿವೃಧ್ಧಿ ನಿಗಮದಿಂದ ೨೦೨೧-೨೨ ನೇ ಸಾಲಿನಲ್ಲಿ ಸ್ವಯಂ ಉದ್ಯೋಗಕ್ಕೆ ನೇರಸಾಲ ಪಡೆಯಲು ಇಚ್ಚಿಸುವವರು ಅಗತ್ಯ ದಾಖಲೆಗಳೊಂದಿಗೆ ಆಯಾಯ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಜನವರಿ ೧೦ ರ ಸಂಜೆ ೫.೩೦ ರೊಳಗೆ ಅರ್ಜಿ ಸಲ್ಲಿಸಬಹುದು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:-ಉಪ್ಪಾರ ಸಮುದಾಯ ಪ್ರವರ್ಗ-೧ ರ ೫೩(ಎ) ಯಿಂದ ೫೩(ವಿ)ವರೆಗಿನ ಉಪ್ಪಾರ, ಬೆಲ್ದರ್, ಚುನಾರ್, ಗಾವಡಿ, ಗೌಂದಿ, ಕಲ್ಲುಕುಟಿಗ ಉಪ್ಪಾರ, ಲೋನಾರಿ, ಮೇಲು ಸಕ್ಕರೆಯವರು, ಮೇಲು ಸಕ್ಕರೆ, ನಾಮದ ಉಪ್ಪಾರ, ಪಡಿತ್, ಪಡ್ತಿ, ಪಡಿತಿ, ಪಾಡಿ, ಸಗರ, ಸುಣ್ಣಗಾರ, ಸುಣ್ಣ ಉಪ್ಪಾರ, ಉಪ್ಪಳಿಗ, ಉಪ್ಪಾಳಿಗ ಶೆಟ್ಟಿ, ಉಪ್ಪಾಳಿಯನ್, ಉಪ್ಪೇರ, ಯಕಲಾರ, ಎಕ್ಕಲಿ ಜಾತಿಗೆ ಸೇರಿದವರಾಗಿರಬೇಕು.
ಅರ್ಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರಕ್ಕೆ ರೂ. ೯೮ ಸಾವಿರಗಳು ಮತ್ತು ನಗರ ಪ್ರದೇಶದವರಿಗೆ ರೂ. ೧,೨೦,೦೦೦ಗಳ ಮಿತಿ ಒಳಗಿರಬೇಕು, ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು, ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ, ಈಗಾಗಲೇ ಬೇರೆ ಯಾವುದೇ ನಿಗಮಗಳ ಯೋಜನೆಗಳಲ್ಲಿ ಸಾಲ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಹಾಗೂ ಅವರ ಕುಟುಂಬದವರಿಗೆ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ.
ಅರಿವು ಶೈಕ್ಷಣಿಕ ಸಾಲ ಯೋಜನೆ-ನವೀಕರಣ ವಿದ್ಯಾರ್ಥಿಗಳಿಗೆ ಮಾತ್ರ: ಕಳೆದ ಸಾಲುಗಳಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ ಪಡೆದ ಉಪ್ಪಾರ ಸಮುದಾಯದ ವಿದ್ಯಾರ್ಥಿಗಳು ೨೦೨೧ -೨೨ ನೇ ಸಾಲಿನಲ್ಲಿ ನವೀಕರಣಕ್ಕಾಗಿ ಸುವಿಧ ತಂತ್ರಾAಶದ ಮೂಲಕ suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಜನವರಿ ೧೦, ೨೦೨೨ ರ ಸಂಜೆ ೫.೩೦ ರೊಳಗೆ ಅರ್ಜಿ ಸಲ್ಲಿಸಬೇಕು. ಕಡ್ಡಾಯವಾಗಿ ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿದಾರರು ಆಧಾರ್ ಕಾರ್ಡ್ ಮತ್ತು ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕಾದ ದಾಖಲೆಗಳು (ಅರಿವು ನವೀಕರಣಕ್ಕೆ): ಕಳೆದ ಸಾಲಿನ ಅಂಕಪಟ್ಟಿ, ಪ್ರಸ್ತುತ ಸಾಲಿನ ವ್ಯಾಸಂಗ ಪ್ರಮಾಣ ಪತ್ರ, ಸಾಲ ಮಂಜೂರಾತಿ ಆದೇಶ, ಹಣ ಸಂದಾಯ ರಶೀದಿ, ಪೋಷಕರ ಒಪ್ಪಿಗೆ ಪತ್ರ, ಜಾಮೀನುದಾರರ ಒಪ್ಪಿಗೆ ಪತ್ರಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ೭೦೨೬೨೮೮೮೮೮ ನ್ನು ಸಂಪರ್ಕಿಸಬಹುದು. ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು uಠಿಠಿಚಿಡಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ತಿಳಿಯಬಹುದಾಗಿದೆ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.