ಮಡಿಕೇರಿ, ಡಿ. ೧: ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ೨೦೨೧-೨೨ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸುವಿಧಾ ತಂತ್ರಾAಶದ ಮುಖಾಂತರ ಆನ್‌ಲೈನ್ ಅರ್ಜಿ ಸ್ವೀಕರಿಸಲಾಗುವುದು.
ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ (ನವೀಕರಣ) ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ೨೦೨೧-೨೨ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ೨ನೇ ಕಂತಿಗೆ ಸುವಿಧಾ ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದೊಂದಿಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಸಂಬAಧಿಸಿದAತೆ, ಹೆಚ್ಚಿನ ಮಾಹಿತಿಗೆ ಹಾಗೂ ಸಲ್ಲಿಸಬೇಕಾಗಿರುವ ದಾಖಲೆಗಳ ಬಗ್ಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ hಣಣಠಿs://ಞಚಿಚಿಜ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಮಾಹಿತಿ ಪಡೆಯಬಹುದು.
ಈ ಯೋಜನೆಗಳಲ್ಲಿ ಹಿಂದಿನAತೆಯೇ ನೇರವಾಗಿ ಅರ್ಜಿ ಸ್ವೀಕರಿಸಲಾಗುವುದು. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ: ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಅಲೆಮಾರಿ ಅರೆ ಅಲೆಮಾರಿ ಇದರ ಉಪಜಾತಿಗಳ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾವಲಯ, ಸಾಂಪ್ರದಾಯಿಕ ವೃತ್ತಿಗಳು ಹಾಗೂ ವೃತ್ತಿ ಕಸುಬುದಾರರಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸಾಲ ಮತ್ತು ಸಹಾಯಧನದ ನೆರವು ನೀಡುವುದು. ಈ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಘಟಕ ವೆಚ್ಚ ರೂ. ೧ ಲಕ್ಷದಿಂದ ೨ ಲಕ್ಷಗಳವರೆಗೆ ಶೇ. ೮೫ ರಷ್ಟು ಕನಿಷ್ಟ ರೂ. ೨೦ ಸಾವಿರ ಗರಿಷ್ಠ ೩೦ ಸಾವಿರಗಳ ಸಹಾಯಧನ, ಉಳಿಕೆ ಶೇ. ೮೫ ರಷ್ಟು ರೂ. ೧,೭೦ ಲಕ್ಷಗಳನ್ನು ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.
ಬ್ಯಾಂಕ್‌ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆ: ಅರ್ಜಿದಾರರು ಕೈಗೊಳ್ಳುವ ವ್ಯಾಪಾರ, ಕೃಷಿ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳು, ಸೇವಾ ಉದ್ದಿಮೆಗಳು, ತಾಂತ್ರ‍್ರಿಕ ಉದ್ದಿಮೆಗಳು ಮತ್ತು ಸಾರಿಗೆ ವಲಯದಲ್ಲಿ ಕೈಗೊಳ್ಳುವ ಆರ್ಥಿಕ ಚಟುವಟಿಕೆಯಾನುಸಾರ ಗರಿಷ್ಠ ರೂ. ೧೦ ಲಕ್ಷಗಳವರೆಗೆ ಬ್ಯಾಂಕ್‌ಗಳಿAದ ಸಾಲ ಪಡೆಯುವುದು. ಬ್ಯಾಂಕ್‌ಗಳು ಮಂಜೂರು ಮಾಡುವ ಸಾಲದ ಮೊತ್ತದಲ್ಲಿ ಶೇ.೨೦ರಷ್ಟು ಅಂದರೆ ರೂ. ೧ ಲಕ್ಷಗಳನ್ನು ನಿಗಮದಿಂದ ಸಹಾಯಧನದ ಮೂಲಕ ಮಂಜೂರು ಮಾಡಲಾಗುವುದು.
ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿ ತಿರಸ್ಕರಿಸಲಾಗುವುದು. ಅರ್ಜಿ ನಮೂನೆಯನ್ನು ನಿಗಮದ ವೆಬ್‌ಸೈಟ್‌ನಲ್ಲಿ ಪಡೆಯಬಹುದು.
ಈ ಯೋಜನೆಗಳ ಸೌಲಭ್ಯ ಪಡೆಯಲು ಹೊಂದಿರಬೇಕಾದ ಸಾಮಾನ್ಯ ಅರ್ಹತೆ: ಅಲೆಮಾರಿ ಮತ್ತು ಅರೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮ ಸಾವಿರಗಳು ಪಟ್ಟಣ ಪ್ರದೇಶದವರಿಗೆ ರೂ. ೧,೨೦ ಲಕ್ಷ ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ನೀಡುವುದು.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಅರ್ಜಿದಾರರು ನಿಗಮದ ವೆಬ್‌ಸೈಟ್ ತಿತಿತಿ.ಞಚಿಚಿಜ.ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲೆಮಾರಿ ಮತ್ತು ಅರೆಮಾರಿ ಅಭಿವೃದ್ಧಿ ನಿಗಮ, ರಾಡ್ರಿಗಸ್ ಕಟ್ಟಡದ ಎದುರು, ರೇಸ್‌ಕೋರ್ಸ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿ ಅಗತ್ಯ ದಾಖಲಾತಿಗಳೊಂದಿಗೆ ೨೦೨೨ ರ ಜನವರಿ ೧೦ ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ೦೮೨೭೨-೨೨೧೬೫೬ ದೂರವಾಣಿ ಮುಖಾಂತರ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದು.
ತAತ್ರಾAಶದ ಮುಖಾಂತರ ಆನ್‌ಲೈನ್ ಅರ್ಜಿ
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೧-೨೨ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸುವಿಧಾ ತಂತ್ರಾAಶದ ಮುಖಾಂತರ ಆನ್‌ಲೈನ್ ಅರ್ಜಿ ಸ್ವೀಕರಿಸಲಾಗುವುದು.
ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ೨೦೨೧-೨೨ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (೩,೪,೫ ನೇ ಕಂತುಗಳು) ಸುವಿಧಾ ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದೊಂದಿಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಸಂಬAಧಿಸಿದAತೆ, ಹೆಚ್ಚಿನ ಮಾಹಿತಿಗೆ ಹಾಗೂ ಸಲ್ಲಿಸಬೇಕಾಗಿರುವ ದಾಖಲೆಗಳ ಬಗ್ಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ hಣಣಠಿs://ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಮಾಹಿತಿಯನ್ನು ಪಡೆಯಬಹುದು.
ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ: ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ವೆಬ್‌ಸೈಟ್ ಸಂಪರ್ಕಿಸಿ ಅರ್ಜಿ ನಮೂನೆಗಳನ್ನು ಪಡೆದು ಅಗತ್ಯ ದಾಖಲಾತಿಗಳನ್ನು ಭರ್ತಿ ಮಾಡಿ ಜಿಲ್ಲಾ ಕಚೇರಿಗಳಿಗೆ ನೇರವಾಗಿ ಸಲ್ಲಿಸಬೇಕು.
ಈ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. ೨ ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಾಗುವುದು. ಇದರಲ್ಲಿ ಗರಿಷ್ಠ ಶೇ. ೧೫ ರಷ್ಟು ಸಹಾಯಧನ. ಉಳಿಕೆ ಮೊತ್ತ ವಾರ್ಷಿಕ ಶೇ. ೪ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತು ಪಡಿಸಿ) ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೪೦ ಸಾವಿರ, ಪಟ್ಟಣ ಪ್ರದೇಶದವರಿಗೆ ರೂ. ೫೫ ಸಾವಿರಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ನೀಡುವುದು.
ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಅರ್ಜಿದಾರರು ನಿಗಮದ ವೆಬ್‌ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಾಡ್ರಿಗಸ್ ಕಟ್ಟಡದ ಎದುರು, ರೇಸ್ ಕೋರ್ಸ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ೨೦೨೨ ರ ಜನವರಿ ೧೦ ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ೦೮೨೭೨-೨೨೧೬೫೬ ದೂರವಾಣಿ ಮುಖಾಂತರ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು.
ಕಾನೂನು ಪದವೀಧರರಿಂದ
ಕಾನೂನು ನವ ಪದವೀಧರರಿಗೆ ೨೦೨೧-೨೨ನೇ ಸಾಲಿಗೆ ಪ್ರೋತ್ಸಾಹಧನ ನೀಡುವ ಯೋಜನೆಯಡಿ ಅರ್ಹ ಕಾನೂನು ಪದವೀಧರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರಿರುವ ಕಾನೂನು ಪದವಿಧರರು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ದಾಖಲೆ ಪ್ರತಿಗಳೊಂದಿಗೆ ಸಂಬAಧಪಟ್ಟ ಹಿರಿಯ ನ್ಯಾಯಾಧೀಶರ ಮುಖಾಂತರ ಡಿಸೆಂಬರ್ ೩೧ ರ ಸಂಜೆ ೫ ಗಂಟೆಯೊಳಗೆ ಸಲ್ಲಿಸಬೇಕು.
ಅರ್ಜಿಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಕೊಡಗು, ಮಡಿಕೇರಿ, ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಡಗು, ಮಡಿಕೇರಿ (ಕಾರ್ಯ ನಿರ್ವಹಣೆ-ವೀರಾಜಪೇಟೆ), ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಸೋಮವಾರಪೇಟೆ, ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪೊನ್ನಂಪೇಟೆ ಹಾಗೂ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಕುಶಾಲನಗರ ಇವರ ಮುಖಾಂತರ ಸಲ್ಲಿಸಬೇಕು.
ಈ ಯೋಜನೆಯು ೨೦೨೧-೨೨ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಷರತ್ತಿನಡಿಯಲ್ಲಿ ಜೂನ್ ೧ ೨೦೨೦ ರಿಂದ ಮೇ ೩೧, ೨೦೨೧ ರವರೆಗೆ ಅವಧಿಯಲ್ಲಿ ವಕೀಲರ ವೃತ್ತಿಗೆ ನೋಂದಾಯಿಸಿದವರಿಗೆ ಮಾತ್ರ ಅನ್ವಯವಾಗುವುದು, ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನದ ಮೊತ್ತ ಪ್ರತಿ ಮಾಹೆಗೆ ರೂ. ೨ ಸಾವಿರ ಒಟ್ಟು ೨೪ ತಿಂಗಳುಗಳ ಅವಧಿಗೆ ಸೀಮಿತವಾಗಿದೆ.
ಸರ್ಕಾರಿ, ಅರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ವಯೋನಿವೃತ್ತಿ ಕಡ್ಡಾಯ ನಿವೃತ್ತಿ ಮತ್ತು ಸ್ವಇಚ್ಚಾ ನಿವೃತ್ತಿ ಹೊಂದಿದ ನಂತರ ವಕೀಲ ವೃತ್ತಿ ನಡೆಸಲು ಇಚ್ಚಿಸುವ ಕಾನೂನು ಪದವೀಧರರು ಮತ್ತು ಅಂತಹ ಯಾವುದೇ ಸೇವೆಯಿಂದ ತೆಗೆದುಹಾಕಲ್ಪಟ್ಟ ಕಾನೂನು ಪದವಿಧರರು ಪ್ರೋತ್ಸಾಹಧನ ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನದ ಮಿತಿಯು ರೂ. ೪೦ ಸಾವಿರ ಮೀರುವಂತಿಲ್ಲ, ಇಂತಹದೇ ಸೌಲಭ್ಯವನ್ನು ಈ ಯೋಜನೆ ಇತರೆ ಯೋಜನೆಯಡಿ ಅಥವಾ ರಾಜ್ಯ ಸರ್ಕಾರದ ಬೇರೆ ಯಾವುದೇ ಇಲಾಖೆಯ ಯೋಜನೆಯಡಿ ಆಯ್ಕೆಗೊಂಡ ಫಲಾನುಭವಿಗಳು ಈ ಯೋಜನೆಯ ಸೌಲಭ್ಯಗಳಿಗೆ ಅರ್ಹತರಾಗುವುದಿಲ್ಲ. ಹೊಸದಾಗಿ ವಕೀಲರ ವೃತ್ತಿಯಲ್ಲಿ ತೊಡಗುವ ಕಾನೂನು ಪದವಿಧರರು ರಾಜ್ಯಬಾರ್ ಕೌನ್ಸಿಲ್‌ನಲ್ಲಿ ನೊಂದಾಯಿಸಿದ ನಂತರ ಸ್ಥಳೀಯ ವಕೀಲರ ಸಂಘದ ಅಧ್ಯಕ್ಷರಿಂದ ಪ್ರಮಾಣ ಪತ್ರ ಪಡೆದು ಸಂಬAದಪಟ್ಟ ಸಮಿತಿಯ ಸಂಬAಧಿತ ತಾಲ್ಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರುಗಳ ಮುಖಾಂತರ ಮತ್ತು ಜಿಲ್ಲಾ ಹಂತದಲ್ಲಿ ಅರ್ಹ ಕಾನೂನು ಪದವೀಧರರು ನೇರವಾಗಿ ಸಮಿತಿಯ ಅಧ್ಯಕ್ಷರ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಸೂಚನೆಗಳು: ನಿಗದಿಪಡಿಸಿದ ಕೊನೆ ದಿನಾಂಕದೊಳಗಾಗಿ ಅರ್ಜಿಯೊಂದಿಗೆ ಸಂಬAಧಪಟ್ಟ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಿ ಅರ್ಹ ಅಭ್ಯರ್ಥಿಗಳು ಆಯಾಯ ತಾಲೂಕಿನ ಹಿರಿಯ ನ್ಯಾಯಾಧೀಶರ ಮುಖಾಂತರ ಅರ್ಜಿ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ, ಪದವಿ ಅಂಕಪಟ್ಟಿ, ಕಾನೂನು ಪದವಿಯ ಪ್ರಮಾಣ ಪತ್ರ, ರಾಜ್ಯ ಬಾರ್ ಕೌನ್ಸಿಲ್‌ನ ನೋಂದಣಿ ಪತ್ರ, ಜಾತಿ, ಆದಾಯ ಪ್ರಮಾಣ ಪತ್ರ ಮತ್ತು ವಕೀಲ ವೃತ್ತಿ ನಿರ್ವಹಿಸುತ್ತಿರುವ ಬಗ್ಗೆ ಸಂಬAಧಿಸಿದ ವಕೀಲರ ಸಂಘದ ಅಧ್ಯಕ್ಷರಿಂದ ಪ್ರಮಾಣ ಪತ್ರ ಪಡೆದು ಎಲ್ಲಾ ದಾಖಲೆಗಳ ಪ್ರತಿಯನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು. ಇತ್ತೀಚಿನ ಭಾವಚಿತ್ರ ಮತ್ತು ಆಧಾರ್ ಕಾರ್ಡ್ ಚುನಾವಣಾ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ನೀಡುವ, ಆಯ್ಕೆಯ ಸಂಬAಧ ಜಿಲ್ಲಾ ಹಂತದ ಸಮಿತಿಯಿಂದ ಮಾಡಲಾಗುವ ತೀರ್ಮಾನವೇ ಅಂತಿಮವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಬಿ.ಎಲ್. ಜಿನರಾಳಕರ ಅವರು ತಿಳಿಸಿದ್ದಾರೆ.
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಗೆ
ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಎಎನ್‌ಎಂ ತರಬೇತಿ ಕೇಂದ್ರಗಳಲ್ಲಿ ೨೪ ತಿಂಗಳ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗೆ ಸೇರ ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತಿತಿತಿ.ಞಚಿಡಿhಜಿತಿ.gov.iಟಿ ವೆಬ್‌ಸೈಟ್‌ನಲ್ಲಿ ಹೋಮ್ ಪೇಜ್‌ನಲ್ಲಿ ವೀಕ್ಷಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯಲ್ಲಿ ಪಡೆದುಕೊಂಡು ಅರ್ಜಿಯನ್ನು ಡಿಸೆಂಬರ್ ೧೦ ರ ಸಂಜೆ ೫.೩೦ ಗಂಟೆಯೊಳಗೆ ದ್ವಿಪ್ರತಿಯಲ್ಲಿ ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಅವರು ತಿಳಿಸಿದ್ದಾರೆ.