ಶನಿವಾರಸಂತೆ, ಡಿ. ೨: ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಗಣಪತಿ ಚಂದ್ರಮೌಳೇಶ್ವರ-ಪಾರ್ವತಿ ದೇವಾಲಯದಲ್ಲಿ ಸೇವಾ ಸಮಿತಿ ವತಿಯಿಂದ ತಾ. ೩ ರಂದು (ಇಂದು) ಸಂಜೆ ೭ ಗಂಟೆಗೆ ವಾರ್ಷಿಕ ಪೂಜೆ ಲಕ್ಷ ದೀಪೋತ್ಸವ ಏರ್ಪಡಿಸಲಾಗಿದೆ. ಗಣಪತಿ ದೇವರಿಗೆ ವಿಶೇಷ ಪ್ರಾರ್ಥನೆ, ಚಂದ್ರಮೌಳೇಶ್ವರನಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಬಿಲ್ವಾರ್ಚನೆ ಮಾಡಲಾಗುವುದು. ದೇವಾಲಯದ ಪ್ರಾಂಗಣದಲ್ಲಿ ಭಕ್ತರಿಂದ ಲಕ್ಷ ದೀಪಗಳನ್ನು ಬೆಳಗಿಸಲಾಗುವುದು ನಂತರ ದೇವರಿಗೆ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಹಾಗೂ ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆ ಎಂದು ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.