ಮಡಿಕೇರಿ, ಡಿ. ೨: ಮೈಸೂರಿನ ಹೂಟಗಳ್ಳಿಯಲ್ಲಿರುವ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿAದ ಜನಾಂಗದವರಿಗಾಗಿ ಕ್ರೀಡಾ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾ.೫ರಂದು ಬೆಳಿಗ್ಗೆ ೮ ಗಂಟೆಗೆ ವಿಜಯನಗರ ೪ನೇ ಹಂತದ ನೀರಿನ ಟ್ಯಾಂಕ್ ಬಳಿ ಇರುವ ಉದ್ಯಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಂಘದ ಅಧ್ಯಕ್ಷ ನಡುಮನೆ ಚಂಗಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬೆಂಗಳೂರು ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಹರೀಶ್ ಗೌಡ, ಮೇ.ಡಾ. ಕುಶವಂತ್ ಕೋಳಿಬೈಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳುವರು. ಇದೇ ಸಂದರ್ಭದಲ್ಲಿ ಜನಾಂಗದವರಿಗಾಗಿ ವಿವಿಧ ಮನೋರಂಜನಾ ಕ್ರೀಡಾಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಅರೆಭಾಷೆ ರಸಪ್ರಶ್ನೆ, ಆದರ್ಶ ದಂಪತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.