ಸೋಮವಾರಪೇಟೆ,ಡಿ.೨: ಅಬ್ಬೂರುಕಟ್ಟೆಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ತಾ. ೬ರಂದು ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸಂಚಾಲಕ ತಿಮ್ಮಯ್ಯ ತಿಳಿಸಿದ್ದಾರೆ. ಅಬ್ಬೂರುಕಟ್ಟೆಯಲ್ಲಿರುವ ನೇರುಗಳಲೆ ಗ್ರಾ.ಪಂ. ಸಮುದಾಯ ಭವನದಲ್ಲಿ ಶಿಬಿರ ನಡೆಯಲಿದ್ದು, ತಾ. ೬ರಂದು ಬೆಳಿಗ್ಗೆ ೧೦ ಗಂಟೆಯಿAದ ಅಪರಾಹ್ನ ೩ ಗಂಟೆಯವರೆಗೆ ರಕ್ತದಾನ ನಡೆಯಲಿದೆ. ಇದರೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ರಕ್ತದೊತ್ತಡ ಹಾಗೂ ಮಧುಮೇಹ ರೋಗ ತಪಾಸಣೆ ನಡೆಸಲಾಗುವುದು ಎಂದು ತಿಮ್ಮಯ್ಯ ತಿಳಿಸಿದ್ದಾರೆ.