ಕೂಡಿಗೆ, ಡಿ. ೨: ಕೂಡಿಗೆಯಲ್ಲಿರುವ ಕೊಡಗು ಸೈನಿಕ ಶಾಲೆಯ ಆವರಣದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಕೂಡಿಗೆಯ ಸ್ನೇಕ್ ಗಫಾರ್ ಅವರ ಸಹಕಾರದಲ್ಲಿ ಹಾವನ್ನು ಹಿಡಿದು ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಅತ್ತೂರು ಮೀಸಲು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಉಪ ವಲಯ ಅರಣ್ಯಾಧಿಕಾರಿ ಅನಿಲ್ ಡಿಸೋಜ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.