ಮಡಿಕೇರಿ, ಡಿ. ೩: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಂ.ಪಿ. ಕೇಶವ ಕಾಮತ್ ತಾ. ೭ ರಂದು ಬೆಳಿಗ್ಗೆ ೧೧ ಗಂಟೆಗೆ ಸುದರ್ಶನ ವೃತ್ತದ ಡಾ. ಅಂಬೇಡ್ಕರ್ ಭವನದ ಬಳಿ ಇರುವ ಎಸ್.ಜಿ.ಎಸ್.ಆರ್.ವೈ. ಕಟ್ಟಡದ ಕ.ಸಾ.ಪ. ಕಚೇರಿ ಮೇಲ್ಭಾಗದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ಭಾಗವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ ಅವರು ಅಧಿಕಾರ ಹಸ್ತಾಂತರಿಸಲಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ಅವರು ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಪ್ರಕಟಣೆ ತಿಳಿಸಿದೆ.