ಮಡಿಕೇರಿ, ಡಿ. ೩: ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಕೊಡಗು ಜಿಲ್ಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚೈಲ್ಡ್ ಲೈನ್ (ಮಕ್ಕಳ ಸಹಾಯವಾಣಿ) ಪೊಲೀಸ್ ಇಲಾಖೆ ಇವರುಗಳ ಸಹಯೋಗದೊಂದಿಗೆ ಬೀದಿ ಬದಿಯ (ಅhiಟಜಡಿeಟಿ iಟಿ sಣಡಿeeಣ siಣuಚಿಣioಟಿ)ಮಕ್ಕಳನ್ನು ಪೋಷಣೆ ಹಾಗೂ ರಕ್ಷಣೆ ಮಾಡುವ ಕುರಿತಂತೆ ಸಂಬAಧಪಟ್ಟ ಇಲಾಖೆಗಳು ಕಾರ್ಯಾಚರಣೆ ನಡೆಸಿ ಮಕ್ಕಳನ್ನು ರಕ್ಷಣೆ ಮಾಡುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ಮೂರ್ನಾಡು ಹಾಗೂ ನಾಪೋಕ್ಲು ಗ್ರಾಮಗಳ ವಿವಿಧ ಸ್ಥಳಗಳಿಗೆ ತೆರಳಿ ಅಲ್ಲಿಯ ವಿವಿಧ ಸಂಸ್ಥೆಗಳಲ್ಲಿ ಹಾಗೂ ಪಟ್ಟಣಗಳ ಬೀದಿಗಳಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭ ಉದ್ಯೋಗದಾತರಿಗೆ ತಮ್ಮ ತಮ್ಮ ಅಧೀನದಲ್ಲಿರುವ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕಳುಹಿಸುವುದು ತಮ್ಮ ಜವಾಬ್ದಾರಿಯಾಗಿದೆ ಎಂಬುದಾಗಿ ಎಚ್ಚರಿಸಲಾಯಿತು. ಭಿತ್ತಿ ಪತ್ರಗಳನ್ನು ವಿತರಿಸಿ, ಬಾಲ್ಯಾವಸ್ಥೆಯ ಹಾಗೂ ಕಿಶೋರವಸ್ಥೆಯ ಕಾರ್ಮಿಕ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು