ಮಡಿಕೇರಿ, ಡಿ. ೩: ವಿಧಾನ ಪರಿಷತ್ ಚುನಾವಣೆ ಸಂಬAಧ ಮತದಾನ ಮಾಡುವ ವಿಧಾನದ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರಿಗೆ ಮಾಹಿತಿ ನೀಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಸೂಚಿಸಿದ್ದಾರೆ.

ನಗರದ ಜಿ.ಪಂ. ಸಿಇಒ ಕಚೇರಿಯಲ್ಲಿ ನಡೆದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಪಾಲ್ಗೊಳ್ಳುವಿಕೆ (ಸ್ವೀಪ್) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬAಧ ಮತದಾನ ಮಾಡುವ ನಿಟ್ಟಿನಲ್ಲಿ, ಸ್ಥಳೀಯ ಮಟ್ಟದಲ್ಲಿ ಅಗತ್ಯ ಮಾಹಿತಿ ನೀಡಬೇಕು. ಮತಹಕ್ಕು ಅಸಿಂಧು ವಾಗದಂತೆ ಯಾವ ರೀತಿ ಮತಹಕ್ಕು ಚಲಾಯಿಸಬೇಕು ಎಂಬ ಬಗ್ಗೆ ಮತದಾರರಿಗೆ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ. ಉಪ ಕಾರ್ಯದರ್ಶಿ ಲಕ್ಷಿö್ಮ ಮತ ಹಕ್ಕು ಚಲಾಯಿಸುವ ಸಂಬAಧ ಚುನಾವಣಾ ಆಯೋಗದ ನಿರ್ದೇಶನ ದಂತೆ ಮಾಹಿತಿ ನೀಡುವಂತೆ ಸಲಹೆ ಮಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜನವರಿ ೧, ೨೦೨೨ ರ ಅರ್ಹತಾ ದಿನಾಂಕದAತೆ ೧೮ ವರ್ಷ ಮೇಲ್ಪಟ್ಟ ಎಲ್ಲರೂ ಸಹ ಭಾವಚಿತ್ರವಿರುವ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು. ಆ ನಿಟ್ಟಿನಲ್ಲಿ ಕಾಲೇಜು ಹಾಗೂ ವಿದ್ಯಾರ್ಥಿನಿಲಯಗಳು ಸೇರಿದಂತೆ ಎಲ್ಲೆಡೆ ವಿಶೇಷ ಅಭಿಯಾನ ಹಮ್ಮಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿ.ಪಂ. ಸಿಇಒ ಸೂಚಿಸಿದರು.

ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆ್ಯಪ್ ಬಿಡುಗಡೆ ಮಾಡಿದ್ದು, ಅರ್ಹರು ತಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ಭನ್ವರ್ ಸಿಂಗ್ ಮೀನಾ ಅವರು ಹೇಳಿದರು.

ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿಯನ್ನು ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ (ಗಿಔಖಿಇಖ ಊಇಐPಐIಓಇ ಂPP) ಅನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಮತದಾರರು/ ನಾಗರಿಕರು ತಮ್ಮ ಮೊಬೈಲ್‌ನಲ್ಲಿ ಮತದಾರರ ಸಹಾಯವಾಣಿ ಆಪ್‌ಅನ್ನು ಡೌನ್ ಲೋಡ್ ಮಾಡಿಕೊಂಡು ಮತದಾರರ ಸಹಾಯವಾಣಿ ಆಪ್‌ನಲ್ಲಿಯೂ ಹಾಗೂ ತಿತಿತಿ.ಟಿvsಠಿ.ಟಿiಛಿ.iಟಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ನಮೂನೆ ೬, ೬ಎ, ೭, ೮ ಮತ್ತು ೮ಎ ನ್ನು ಸಲ್ಲಿಸಬಹುದು ಎಂದು ತಿಳಿಸಿದರು.

ಜನವರಿ ೨೫ ರಂದು ರಾಷ್ಟಿçÃಯ ಮತದಾರರ ದಿನಾಚರಣೆ ನಡೆಯಲಿದ್ದು, ಈ ಸಂಬAಧ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ ಕಾರ್ಯಕ್ರಮ ತಾಲೂಕು ಮಟ್ಟದಲ್ಲಿ ನಡೆದಿದೆಯೇ ಎಂದು ಮಾಹಿತಿ ಪಡೆದರು. ಹಾಗೆಯೇ ಜಿಲ್ಲಾ ಮಟ್ಟದ ಸ್ಪರ್ಧೆ ಪೂರ್ಣಗೊಳಿಸುವಂತೆ ಸೂಚಿಸಿದರು.

೨೦೨೨ ರ ಜನವರಿ ೨೫ ರಂದು ನಡೆಯುವ ರಾಷ್ಟಿçÃಯ ಮತದಾರರ ದಿನದಂದು ಪುಸ್ತಕಗಳ ರೂಪದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲು ಕ್ರಮವಹಿಸಬೇಕು. ಚುನಾವಣಾ ಸಾಕ್ಷರತಾ ಸಂಘ ಪ್ರಶಸ್ತಿಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಂದ ತಲಾ ೩ ಶಾಲಾ-ಕಾಲೇಜುಗಳ ಪ್ರಸ್ತಾವನೆ ಸಲ್ಲಿಸುವಂತೆ ಜಿ.ಪಂ. ಉಪ ಕಾರ್ಯದರ್ಶಿ ಲಕ್ಷಿö್ಮà ಸಲಹೆ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೇದಮೂರ್ತಿ, ಕೂಡಿಗೆ ಡಯಟ್ ಪ್ರಾಂಶುಪಾಲ ಕೆ.ವಿ. ಸುರೇಶ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಪಿ. ಶ್ರೀನಿವಾಸ್, ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ, ತಾ.ಪಂ. ಇಒಗಳಾದ ಶೇಖರ್, ಅಪ್ಪಣ್ಣ, ಜಯಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಬೀಳಗಿ, ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ಇತರರು ಸ್ವೀಪ್ ಕಾರ್ಯಕ್ರಮ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.