ಬೆಂಗಳೂರು, ಡಿ. ೩: ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಬಂದಿದ್ದವರ ಪೈಕಿ ಇಬ್ಬರಿಗೆ ಓಮಿಕ್ರಾನ್ ಕೊರೊನಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ನಿರ್ದಿಷ್ಟ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ವಿವರ ಇಂತಿದೆ.
ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ೫೦೦ ಜನರಿಗೆ ಸೀಮಿತಗೊಳಿಸಲಾಗಿದೆ ಮತ್ತು ಇಂತಹ ಸಂದರ್ಭಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಇವುಗಳನ್ನು ಜಾರಿಗೊಳಿಸುವುದು ಸಂಘಟಕರ, ವ್ಯವಸ್ಥಾಪಕರ ಜವಾಬ್ದಾರಿಯಾಗಿರುತ್ತದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಸುವ ಸಾಂಸ್ಕೃತಿಕ ಚಟುವಟಿಕೆ, ಹಬ್ಬಗಳು ಮತ್ತು ಸಮಾರಂಭಗಳನ್ನು ೧೫ನೇ ಜನವರಿ ೨೦೨೨ರವರೆಗೆ ಮುಂದೂಡಬೇಕು.
ಶಾಲಾ - ಕಾಲೇಜುಗಳಿಗೆ ತೆರಳುವ ೧೮ ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರಬೇಕು. ಆರೋಗ್ಯ ಕಾರ್ಯಕರ್ತರು, ೬೫ ವಯಸ್ಸು ಮೀರಿದ ಹಿರಿಯ ನಾಗರಿಕರು ಮತ್ತು ಸಹವರ್ತಿ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವಂತಹ ವ್ಯಕ್ತಿಗಳಿಗೆ ಮಾತ್ರ ಮಾಲ್‌ಗಳು, ಸಿನಿಮಾ ಹಾಲ್, ಚಿತ್ರಮಂದಿರಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು.
ಸರ್ಕಾರಿ ನೌಕರರು ಎರಡು ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರಬೇಕು. ಮುಖಗವಸು ಧರಿಸುವಿಕೆ ಅತ್ಯಾವಶ್ಯಕವಾದ ಸೋಂಕು ನಿಯಂತ್ರಣ ಕ್ರಮವಾಗಿದ್ದು, ಈ ಪ್ರಮುಖ ಅಗತ್ಯತೆಯನ್ನು ಜಾರಿಗೊಳಿಸುವ ಸಂಬAಧ ಯಾವುದೇ ವ್ಯಕ್ತಿಯು ಮುಖಗವಸನ್ನು ಸರಿಯಾಗಿ ಧರಿಸದಿರುವುದು ಕಂಡುಬAದಲ್ಲಿ ಬಿಬಿಎಂಪಿ ಜಿಲ್ಲಾ ಪ್ರಾಧಿಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳು ನಗರ ಪಾಲಿಕೆ ಪ್ರದೇಶಗಳಲ್ಲಿ ರೂ. ೨೫೦ ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ. ೧೦೦ ದಂಡವನ್ನು ವಿಧಿಸಬೇಕು.
ಸ್ಥಳೀಯವಾಗಿ ಪ್ರಕರಣಗಳು ಹರಡುವುದನ್ನು ತಡೆಗಟ್ಟಲು ಹೆಚ್ಚಿನ ಪ್ರಕರಣಗಳು ಕಂಡುಬರುವ ವಲಯ, ಪ್ರದೇಶಗಳಲ್ಲಿ ಕಠಿಣವಾದ ಸೂಕ್ಷö್ಮ ನಿಯಂತ್ರಣ ಕ್ರಮಗಳನ್ನು ಸಂಬAಧಿಸಿದವರು ಕೈಗೊಳ್ಳಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಚಾಲ್ತಿಯಲ್ಲಿರುವ ಸುತ್ತೋಲೆ, ಮಾರ್ಗಸೂಚಿಗಳನುಸಾರ ಕೇರಳ ಮತ್ತು ಮಹಾರಾಷ್ಟç ರಾಜ್ಯಗಳಿಗೆ ಹೊಂದಿಕೊAಡಿರುವ ಕರ್ನಾಟಕದ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ಗಳಲ್ಲಿ ಹೆಚ್ಚಿನ ಕಣ್ಗಾವಲು ಇರಿಸುವುದನ್ನು ಮುಂದುವರಿಸಬೇಕು ಎಂದು ಸರ್ಕಾರದ ಕಂದಾಯ ಇಲಾಖೆ (ವಿ.ನಿ) ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.