ಚೆಯ್ಯಂಡಾಣೆ, ಡಿ. ೩: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಅನಿರುದ್ದ್ ಜಗದೀಶ್ ಸಹೋದರರು ದಾನವಾಗಿ ನೀಡಿದ ಕಂಪ್ಯೂಟರ್ ಹಾಗೂ ಪ್ರಿಂಟರ್‌ಗಳ ಉದ್ಘಾಟನೆಯನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ನೆರವೇರಿಸಿದರು. ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷರಾದ ರತ್ನ, ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.