ಪೊನ್ನಂಪೇಟೆ, ಡಿ. ೩: ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್‌ಎಸ್‌ಎಸ್, ಎನ್‌ಸಿಸಿ, ಯುವ ರೆಡ್‌ಕ್ರಾಸ್, ರೋವರ್ಸ್ ರೇಂಜರ್ಸ್ ಘಟಕ, ಐಕ್ಯೂಎಸಿ ಸೆಲ್ ಹಾಗೂ ವೀರಾಜಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ರಕ್ತದಾನ ಹಾಗೂ ರಕ್ತದ ಗುಂಪು ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಾವೇರಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸೇರಿದಂತೆ ೪೫ ಮಂದಿ ರಕ್ತದಾನ ಮಾಡಿದರು.
ವೀರಾಜಪೇಟೆ ರೋಟರಿ ಕ್ಲಬ್‌ನ ಅಧ್ಯಕ್ಷ ಎಂ.ಯು. ಚಂಗಪ್ಪ ಗಿಡಕ್ಕೆ ನೀರೆರೆಯುವ ಮೂಲಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು. ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯ ಡಾ. ರಶ್ಮಿ, ರೋಟರಿ ಕ್ಲಬ್ ಕಾರ್ಯದರ್ಶಿ ಭರತ್ ರಾಮ್ ರೈ, ರೋಟರಿ ಕ್ಲಬ್‌ನ ಕೆ.ಹೆಚ್. ಆದಿತ್ಯ, ರಾಷ್ಟಿçÃಯ ಸೇವಾ ಯೋಜನೆ ಅಧಿಕಾರಿಗಳಾದ ಎಂ.ಎನ್. ವನಿತ್ ಕುಮಾರ್, ಎನ್. ಪಿ.ರೀತಾ, ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಎಂ.ಆರ್. ಅಕ್ರಂ, ಯುವ ರೆಡ್‌ಕ್ರಾಸ್ ಘಟಕದ ಅಧಿಕಾರಿ ಎಂ.ಎ. ಕುಶಾಲಪ್ಪ ಹಾಜರಿದ್ದರು. ವಿದ್ಯಾರ್ಥಿ ರಂಜಿತ್ ಸ್ವಾಗತಿಸಿ, ತನುಷ್ ವಂದಿಸಿದರು. ಲಕ್ಷ್ಯ ಮತ್ತು ವಸುಂಧರ ಭಾರ್ಗವ್ ಕಾರ್ಯಕ್ರಮ ನಿರೂಪಿಸಿದರು.