ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಕೇಂದ್ರ ಸಚಿವರುಗಳ ಭೇಟಿ

ನವದೆಹಲಿ, ಡಿ. ೨: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಜಲಶಕ್ತಿ, ಆರೋಗ್ಯ ಹಾಗೂ ಕಾನೂನು ಸಚಿವರನ್ನು ಭೇಟಿ ಮಾಡಿದರು. ಕೇಂದ್ರ ಸಚಿವರ ಭೇಟಿ ನಂತರ ಮುಖ್ಯಮಂತ್ರಿಗಳು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭದ್ರಾ ಮೇಲ್ದಂಡೆ ರಾಷ್ಟಿçÃಯ ಯೋಜನೆ ಮಾಡೋದಕ್ಕೆ ತಾ. ೬ ರಂದು ಮಹತ್ವದ ಸಭೆ ಇದೆ. ಈ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟಿçÃಯ ಯೋಜನೆ ಎಂದು ಘೋಷಣೆ ಮಾಡಲು ನಿರ್ಧಾರ ಕೈಗೊಳ್ಳಬೇಕೆಂಬ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ ಮಾಡಿದ್ದೇವೆ. ಈ ನಿರ್ಣಯದ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಕಾರಾತ್ಮಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು. ಅಲ್ಲದೆ, ಕೃಷ್ಣಾ ಮೇಲ್ದಂಡೆ ೨ನೇ ಟ್ರಿಬುನಲ್ ನೋಟಿಫಿಕೇನ್ ವಿಚಾರ ಸುಪ್ರೀಂಕೋರ್ಟ್ನಲ್ಲಿದೆ. ಅದರಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಪ್ರಕಟ ಮಾಡಬೇಕು ಮತ್ತು ಕಾನೂನು ಪ್ರಕಾರ ಟ್ರಿಬ್ಯುನಲ್ ಆಧಾರದಲ್ಲಿ ಸಂಪೂರ್ಣ ವರದಿ ಕೊಟ್ಟ ನಂತರ ಪರಿಪೂರ್ಣ ಪಾಲನೆಯಾಗಬೇಕು. ಆ ನಿಟ್ಟಿನಲ್ಲಿ ಜಲಶಕ್ತಿ ಇಲಾಖೆಯಿಂದ ನಿರ್ದೇಶನವನ್ನು ಹೊರಡಿಸಬೇಕೆಂಬ ವಿಚಾರವನ್ನು ಕೇಂದ್ರ ಸಚಿವರ ಮುಂದೆ ಇಟ್ಟಿದ್ದೇವೆ. ಇದಲ್ಲದೆ, ಗೋದಾವರಿ, ಕಾವೇರಿ, ಕೃಷ್ಣಾ ಮಹಾನದಿ ಜೋಡಣೆ ಮಾಡುವ ಬಗ್ಗೆ ನಮ್ಮ ಅಹವಾಲನ್ನು ಕೇಳದೆ ಅದರ ಡಿಪಿಆರ್‌ನ್ನು ಮಾಡಬಾರದು ಅನ್ನೋ ವಿಚಾರ ತಿಳಿಸಿದ್ದೇವೆ. ತಮಿಳುನಾಡಿನ ಜೋಡಣೆಯ ಯೋಜನೆ ಬಗ್ಗೆ ಮೇಕೆದಾಟು ಯೋಜನೆ ಪೂರ್ಣವಾಗುವರೆಗೂ ಕ್ಲಿಯರೆನ್ಸ್ ಕೊಡಬಾರದು ಅಂತಾ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿಳಿಸಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು. ಕೋವಿಡ್ ನಿರ್ವಹಣೆ ಮತ್ತು ಈಗಿರುವ ಹೊಸ ತಳಿ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಅವರ ಜೊತೆ ಚರ್ಚೆ ಮಾಡಿದ್ದೇವೆ. ಕೋವಿಡ್ ನಿರ್ವಹಣೆ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಅಲ್ಲದೆ, ಆರೋಗ್ಯ ಸಿಬ್ಬಂದಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸಚಿವರನ್ನು ಪ್ರಶ್ನಿಸಿದಾಗ ಈ ಬಗ್ಗೆ ಕೋವಿಡ್ ತಜ್ಞರ ಜೊತೆ ಚರ್ಚೆ ನಡೆಸುತ್ತೇವೆ. ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡು ರಾಜ್ಯ ಸರ್ಕಾರಗಳಿಗೆ ತಿಳಿಸುತ್ತೇವೆ ಅನ್ನೋ ಬಗ್ಗೆ ಕೇಂದ್ರ ಸಚಿವ ಮನ್ಸೂಕ್ ಮಾಂಡವಿಯಾ ತಿಳಿಸಿದ್ದಾರೆ. ಕೇರಳದಿಂದ ಕೊರೊನಾ ಸೋಂಕು ಹರಡುವ ಬಗ್ಗೆ ರಾಜ್ಯ ಸರ್ಕಾರ ಉತ್ತಮ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ ಅಂತಾ ಕೇಂದ್ರ ಸಚಿವರು ತಿಳಿಸಿದರು ಎಂದು ಮುಖ್ಯಮಂತ್ರಿಗಳು ಹೇಳಿದರು.

ಆರೋಪಿಗೆ ಥಳಿತ; ಪೊಲೀಸ್ ಸಿಬ್ಬಂದಿ ಅಮಾನತು

ಕಲಬುರಗಿ, ಡಿ. ೨: ಕಸ್ಟಡಿಯಲ್ಲಿದ್ದ ಆರೋಪಿಗೆ ಥಳಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ನಾಲ್ಕು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವುದಾಗಿ ಕಲಬುರಗಿ ಪೊಲೀಸ್ ಆಯುಕ್ತ ವೈ.ಎಸ್. ರವಿಕುಮಾರ್ ಅವರು ಹೇಳಿದ್ದಾರೆ. ವ್ಯಕ್ತಿಯೋರ್ವನನ್ನು ಠಾಣೆಗೆ ಕರೆತಂದು ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಕಲಬುರಗಿ ನಗರದ ಚೌಕ್ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಗುರುವಾರ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ವೈ.ಎಸ್. ರವಿಕುಮಾರ್ ಮಾಹಿತಿ ನೀಡಿದ್ದು, ಪೊಲೀಸ್ ಪೇದೆಗಳಾದ ರಾಜಕುಮಾರ್, ಉಮೇಶ್, ಕೇಶುರಾವ್ ಮತ್ತು ಅಶೋಕ್ ಅವರನ್ನು ಅಮಾನತು ಗೊಳಿಸಲಾಗಿದೆ. ಅಂತೆಯೇ ಚೌಕ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಆರ್. ನಾಯ್ಕ್ ಮೇಲೆ ಕಲಂ ೭ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಚೌಕ್ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳ ವಿರುದ್ಧ ದಾಖಲಾಗಿದ್ದ ದೂರನ್ನು ಪರಿಶೀಲಿಸಿದ ಬಳಿಕ ಮತ್ತು ಕಲಬುರಗಿ-ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತರ ಸೂಚನೆಯಂತೆ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದಾರೆ. ಆರೋಪಗಳು ಪ್ರಾಥಮಿಕವಾಗಿ ಸಾಬೀತಾದ ಕಾರಣ, ೪ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಗೊಳಿಸಲಾಗಿದೆ ಮತ್ತು ಮುಂದಿನ ವಿಚಾರಣೆಗಾಗಿ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಸೆಕ್ಷನ್ ೭ ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಬೆAಗಳೂರು, ಡಿ. ೨: ಚಂದನವನದ ಹಿರಿಯ ನಟ ಶಿವರಾಂ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಕೆರೆ ಹಳ್ಳಿಯ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ೩ ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಮನೆಯಲ್ಲಿದ್ದ ವೇಳೆ ಶಿವರಾಂ ಅವರ ಸ್ಥಿತಿ ಮತ್ತೆ ಗಂಭೀರವಾಗಿದೆ. ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ವೈದ್ಯರು ಶಿವರಾಂ ಅವರ ಆರೋಗ್ಯ ಚೇತರಿಕೆಗೆ ಮಿರಾಕಲ್ ಆಗಬೇಕು ಎಂದು ಹೇಳಿದ್ದಾರೆ. ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರ ಆರೋಗ್ಯದ ಬಗ್ಗೆ ಶಿವರಾಮ್ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದಾರೆ. ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.