ವೀರಾಜಪೇಟೆ, ಡಿ. ೩: ಕುಟ್ಟ ಗ್ರಾಮ ಪಂಚಾಯಿತಿಯಲ್ಲಿ, ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉದ್ಯೋಗ ಚೀಟಿ ಹೊಂದಿರುವ ಕುಟುಂಬದವರಿಗೆ ಕೋವಿಡ್ ಲಸಿಕೆಯನ್ನು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೀಡಲಾಯಿತು. ಈ ಸಂದರ್ಭ ತಾಲೂಕು ಐ.ಇ.ಸಿ. ಸಂಯೋಜಕ ನರೇಂದ್ರ ಅವರು ಕೋವಿಡ್ ಕುರಿತು ಮಾಹಿತಿ ನೀಡಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಮಾತನಾಡಿ, ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಂಡು ಕುಟುಂಬದ ಆರೋಗ್ಯ ಹಾಗೂ ಸಮಾಜ ಅಭಿವೃದ್ಧಿಗೆ ಶ್ರಮಿಸಲು ಸೂಚಿಸಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.