ಪೊನ್ನಂಪೇಟೆ, ಡಿ. ೩: ಇತ್ತೀಚೆಗೆ ಗೋಣಿಕೊಪ್ಪಲು ಕಾವೇರಿ ಕಾಲೇಜು ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಕ್ರೀಡೆಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ. ಸಂತೋಷ್ ಅವರ ಮಾರ್ಗದರ್ಶನದಲ್ಲಿ ಹಾಕಿ, ಫುಟ್ಬಾಲ್, ಥ್ರೋಬಾಲ್, ಕಬಡ್ಡಿ, ವಾಲಿಬಾಲ್ ಫ್ಲೋರ್ ಬಾಲ್, ಬಾಸ್ಕೆಟ್ ಬಾಲ್, ಹ್ಯಾಂಡ್ ಬಾಲ್, ಕರಾಟೆ ಹಾಗೂ ಮೇಲಾಟಗಳಲ್ಲಿ ಕಾವೇರಿ ಪದವಿಪೂರ್ವ ಕಾಲೇಜಿನ ೨೯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುವುದಾಗಿ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ತಿಳಿಸಿದ್ದಾರೆ.