ಚೆಯ್ಯAಡಾಣೆ, ಡಿ. ೩: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಸಂತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಶಿಕ್ಷಕಿ ಮೀನಾ ಮಾತನಾಡಿ, ಇಂದಿನ ಮಕ್ಕಳಸಂತೆ ಕಾರ್ಯಕ್ರಮ ಶ್ಲಾಘನೀಯ, ವಿದ್ಯಾರ್ಥಿಗಳಿಗೂ ವ್ಯವಹಾರ ಜ್ಞಾನ ಮೂಡಿಸಲು ಇದು ಸಹಕಾರಿ ಎಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ವಿದ್ಯಾರ್ಥಿಗಳಿಗೆ ಕಿರುಕಾಣಿಕೆ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷೆ ರತ್ನ ಹಾಗೂ ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು. ಮುಖ್ಯ ಶಿಕ್ಷಕಿ ಮೀನಾ ಸ್ವಾಗತಿಸಿ, ಸಹಶಿಕ್ಷಕಿ ಆರ್ಶಿಯಾ ವಂದಿಸಿದರು.