ಸುಂಟಿಕೊಪ್ಪ, ಡಿ. ೨: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾದಾಪುರ ಕೃಷಿ ಪರಿಷತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಬಿ.ಜೆ.ಪಿ.ಯಿಂದ ಮಾದಾಪುರ ಗ್ರಾಮ ಪಂಚಾಯಿತಿ ಹರದೂರು ಗ್ರಾಮ ಪಂಚಾಯಿತಿ ಹಾಗೂ ಗರ್ವಾಲೆ ಗ್ರಾಮ ಪಂಚಾಯಿತಿ ಸದಸ್ಯರುಗಳ ಹಾಗೂ ಕಾರ್ಯಕರ್ತರ ಸಭೆ ನಡೆಯಿತು.

ಅಭ್ಯರ್ಥಿ ಸುಜಾಕುಶಾಲಪ್ಪ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ ಮಾತನಾಡಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಮಡಿಕೇರಿ ಮೂಡ ಅಧ್ಯಕ್ಷ ರಮೇಶ್ ಹೊಳ್ಳ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಡಿ. ಮಂಜುನಾಥ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಮಾದಾಪುರ ಗ್ರಾ.ಪಂ. ಅಧ್ಯಕ್ಷೆ ಶೀಲಾ, ಗರ್ವಾಲೆ ಗ್ರಾ.ಪಂ. ಅಧ್ಯಕ್ಷ ನಂಜುAಡ, ಹರದೂರು ಗ್ರಾ.ಪಂ. ಅಧ್ಯಕ್ಷ ಪದ್ಮನಾಭ ಉಪಸ್ಥಿತರಿದ್ದರು.