ಮಡಿಕೇರಿ, ಡಿ. ೩: ನೆಹರು ಯುವ ಕೇಂದ್ರ ಮಡಿಕೇರಿ. ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ಹಾಗೂ ಜಿಲ್ಲಾ ಯುವ ಒಕ್ಕೂಟದ ವತಿಯಿಂದ ಮಡಿಕೇರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ‘ರಾಷ್ಟç ಕಟ್ಟುವಲ್ಲಿ ಯುವಜನರ ಪಾತ್ರ’ ಕುರಿತಾಗಿ ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕೊಂಡಗೇರಿಯ ಶಾಹಿದ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಬಹುಮಾನವನ್ನು ಅಪೂರ್ವ ಹಾಗೂ ತೃತೀಯ ಸ್ಥಾನವನ್ನು ರೋಷನ್ ಪಡೆದುಕೊಂಡಿದ್ದಾರೆ. ಪ್ರಥಮ ಬಹುಮಾನ ರೂ. ೫,೦೦೦ ಹಾಗೂ ಪ್ರಮಾಣ ಪತ್ರ, ದ್ವಿತೀಯ ರೂ. ೨,೦೦೦ ಹಾಗೂ ಪ್ರಮಾಣ ಪತ್ರ, ತೃತೀಯ ಬಹುಮಾನ ರೂ. ೧,೦೦೦ ಹಾಗೂ ಪ್ರಮಾಣ ಪತ್ರ ನೀಡಲಾಯಿತು. ಪ್ರಥಮ ಬಹುಮಾನ ಪಡೆದವರು ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ ತಿಳಿಸಿದ್ದಾರೆ.