ಮಡಿಕೇರಿ, ಡಿ. ೩: ನೂತನ ರಾಷ್ಟಿçÃಯ ಶಿಕ್ಷಣ ನೀತಿ ೨೦೨೦ ಕುರಿತು ಒಂದು ದಿನ ಕಾರ್ಯಾಗಾರವನ್ನು ಮಂಗಳೂರು ವಿಶ್ವವಿದ್ಯಾಲಯ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವತಿಯಿಂದ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ವಿಶ್ವವಿದ್ಯಾಲಯದ ರಾಷ್ಟಿçÃಯ ಶಿಕ್ಷಣ ನೀತಿಯ ನೋಡಲ್ ಅಧಿಕಾರಿ ಪ್ರೊ. ರವಿಂದ್ರಾಚಾರಿ ಮತ್ತು ಮಂಗಳೂರು ವಿಶ್ವವಿದ್ಯಾಲಯದ ಐಕ್ಯುಎಸಿ ನಿರ್ದೇಶಕರಾದ ಪ್ರೊ. ಮಂಜುನಾಥ ಪಟ್ಟಾಭಿ ಅವರು ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು.
ನೂತನ ಶಿಕ್ಷಣ ನೀತಿಯ ಕುರಿತು ವಿವರಿಸಿದ ಪ್ರೊ. ರವಿಂದ್ರಾಚಾರಿ, ಭಾರತೀಯ ಕೇಂದ್ರಿತ ಶಿಕ್ಷಣ ನೀತಿ ಇದಾಗಿದ್ದು, ವಿದ್ಯಾರ್ಥಿಗಳಲ್ಲಿರುವ ಕೌಶಲ್ಯವನ್ನು ವೃದ್ಧಿಸಲು ನೂತನ ಶಿಕ್ಷಣ ನೀತಿ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಹಲವಾರು ವಿಷಯಗಳ ಬಗ್ಗೆ ಜ್ಞಾನಾರ್ಜನೆಗೆ ಅವಕಾಶ ಕಲ್ಪಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಮಗ್ರ ಜ್ಞಾನ ವೃದ್ಧಿಸುವ ಸಲುವಾಗಿ ಡಿಜಿಟಲ್ ಸ್ಕಿಲ್ ಅನ್ನು ಕಲಿಕೆಯ ಭಾಗವಾಗಿ ಅಳವಡಿಸಲಾಗುತ್ತದೆ. ಈ ಕುರಿತು ಉಪನ್ಯಾಸಕರಿಗೂ ಸೂಕ್ತ ತರಬೇತಿಯನ್ನು ಶೀಘ್ರವೇ ನೀಡಲಾಗುತ್ತದೆ ಎಂದು ಹೇಳಿದರು.
ಪ್ರೊ. ಮಂಜುನಾಥ ಪಟ್ಟಾಭಿಯವರು ತಾಂತ್ರಿಕ ಕಾರ್ಯಾಗಾರ ನಡೆಸಿ ಮಾತನಾಡಿ ಪಠ್ಯ ಚಟುವಟಿಕೆಯೊಂದಿಗೆ ಯೋಗ, ಎನ್ಸಿಸಿ, ಎನ್ಎಸ್ಎಸ್, ಇತರ ಸಾಂಸ್ಕೃತಿಕ ಚಟುವಟಿಕೆಗಳಿಗೂ ಮಹತ್ವ ಕೊಟ್ಟಿರುವುದನ್ನು ವಿವರಿಸಿ, ವಿದ್ಯಾರ್ಥಿಗಳ ಎಲ್ಲಾ ಚಟುವಟಿಕೆಗಳಿಗೂ ಅಂಕ ನೀಡಿ ಪ್ರೋತ್ಸಾಹಿಸುವ ಕ್ರಮವನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಎನ್ಸಿಸಿ ಅಧಿಕಾರಿ ಮೇ. ಡಾ. ರಾಘವ ಬಿ., ಸ್ನಾತಕೋತ್ತರ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ತಿಪ್ಪೇಸ್ವಾಮಿ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಲಕ್ಷಿö್ಮÃದೇವಿ, ರಾಸಾಯನ ಶಾಸ್ತç ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಸೇರಿದಂತೆ, ಕೊಡಗಿನ ಎಲ್ಲಾ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಚೌರೀರ ಜಗತ್ ತಿಮ್ಮಯ್ಯ ವಹಿಸಿದ್ದರು. ಸಿಬ್ಬಂದಿ ಚಂದ್ರವಾತಿ ಪ್ರಾರ್ಥಿಸಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಪೂಣಚ್ಚ ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ರವಿಶಂಕರ್ ವಂದಿಸಿದರು.