ಮಡಿಕೇರಿ, ಡಿ. ೪: ಕರ್ನಾಟಕ ವಿಧಾನಪರಿಷತ್ತಿನ ಚುನಾವಣೆ ಹಿನ್ನೆಲೆ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಬಿ.ಸಿ. ಸತೀಶ ತಾ. ೮ರ ಸಂಜೆ ೪ ಗಂಟೆಯಿAದ ತಾ. ೧೦ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯಗಳ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ & ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಿದ್ದಾರೆ.