ನಾಪೋಕ್ಲು, ಡಿ. ೪: ಸಮೀಪದ ನೆಲಜಿ ಅಂಬಲ ಮಹಿಳಾ ಸಮಾಜದ ವತಿಯಿಂದ ಜಿಲ್ಲಾ ಮಟ್ಟದ ತೆಂಗಿನಕಾಯಿಗೆ ಗುಂಡುಹೊಡೆಯುವ ಸ್ಪರ್ಧೆ ಹಾಗೂ ಹಗ್ಗ ಜಗ್ಗಾಟ ಕ್ರೀಡಾಕೂಟ ತಾ. ೫ ರಂದು (ಇಂದು) ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ನಡೆಯಲಿದೆ. ಸ್ಪರ್ಧೆಗಳು ಮಹಿಳಾ ಸಮಾಜದ ಅಧ್ಯಕ್ಷೆ ಮಣವಟ್ಟಿರ ಕಮಲಬೆಳ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.